Webdunia - Bharat's app for daily news and videos

Install App

ಅಪ್ರಾಪ್ತ ವಯಸ್ಸಿನ ಪತ್ನಿ ಕೊಂದು ಪರಾರಿ!

Webdunia
ಮಂಗಳವಾರ, 9 ನವೆಂಬರ್ 2021 (08:40 IST)
ತುಮಕೂರು : ಅಪ್ರಾಪ್ತ ವಯಸ್ಸಿನ ಪತ್ನಿಯ ಕೊಂದು ಪರಾರಿಯಾಗಿದ್ದ ಆರೋಪಿಯನ್ನು ಪೋಕ್ಸೋ ಕಾಯಿದೆ ಅಡಿ ತುಮಕೂರು ಪೊಲೀಸರು ಬಂಧಿಸಿದ್ದಾರೆ.
ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗಿದ್ದ ಭೂಪನೊಬ್ಬ, ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿ ಜಗಳ ತೆಗೆದು ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಕುಟುಂಬ ಸಮೇತ ಪರಾರಿಯಾಗಿದ್ದ. ಆರೋಪಿಯನ್ನ ಪೊಲೀಸರು ಇದೀಗ ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಆವಲಯ್ಯನ ಪಾಳ್ಯದ ನಿವಾಸಿ, 16 ವರ್ಷದ ಶೋಭಾ, ಕಳೆದ ತಿಂಗಳು 5ನೇ ತಾರೀಖು ಮನೆಯಲ್ಲಿ ಕೊಲೆಗೀಡಾಗಿದ್ದಳು. ಮನೆಯಲ್ಲಿ ಜಗಳ ತೆಗೆದು ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಕೊಲೆ ಮಾಡಿದ್ದ ಆರೋಪದ ಮೇಲೆ ಪತಿ ಲಕ್ಷ್ಮೀಪತಿಯನ್ನ ಪೊಲೀಸರು ಬಂಧಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ನೀಡಿದ ದೂರಿನ ಅನ್ವಯ ಲಕ್ಷ್ಮೀಪತಿ ವಿರುದ್ಧ ಕೊಲೆ ಹಾಗೂ ಪೋಕ್ಸೋ ದೂರು ದಾಖಲಾಗಿದೆ. ಆತನ ತಂದೆ ಮತ್ತು ಬಾಲಕಿಯ ತಂದೆ ತಾಯಿ ವಿರುದ್ಧವೂ ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ. ಒಟ್ಟಾರೆ ಇನ್ನೂ ಓದುತ್ತಿದ್ದ ಬಾಲಕಿಯನ್ನ ಮದುವೆಯಾಗಿ ಜೀವ ತೆಗೆದಿರುವ ದರ್ಮಾರ್ಗಿಗೆ ತಕ್ಕ ಶಿಕ್ಷೆಯಾಗಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments