Select Your Language

Notifications

webdunia
webdunia
webdunia
webdunia

ಗೌರಿ ಲಂಕೇಶ್‌ ಹತ್ಯೆ ವಿಚಾರ; ರಾಹುಲ್‌ ಗಾಂಧಿ ವಿರುದ್ಧ ಆರ್.ಎಸ್.ಎಸ್. ನೀಡಿದ ಮಾನನಷ್ಟ ಮೊಕದ್ದಮೆ ವಜಾ

ಗೌರಿ ಲಂಕೇಶ್‌ ಹತ್ಯೆ  ವಿಚಾರ; ರಾಹುಲ್‌ ಗಾಂಧಿ ವಿರುದ್ಧ ಆರ್.ಎಸ್.ಎಸ್. ನೀಡಿದ ಮಾನನಷ್ಟ ಮೊಕದ್ದಮೆ ವಜಾ
ಮುಂಬೈ , ಗುರುವಾರ, 4 ಜುಲೈ 2019 (12:51 IST)
ಮುಂಬೈ : ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ  ವಿಚಾರದ ಬಗ್ಗೆ ರಾಹುಲ್‌ ಗಾಂಧಿ ನೀಡಿದ ಹೇಳಿಕೆ ವಿರುದ್ದ ಆರ್.ಎಸ್.ಎಸ್. ಕಾರ್ಯಕರ್ತರು ನೀಡಿದ ಮಾನನಷ್ಟ ಮೊಕದ್ದಮೆಯನ್ನು ಮುಂಬೈನ ಶಿವಡಿ ನ್ಯಾಯಾಲಯ ವಜಾಗೊಳಿಸಿದೆ ಎಂಬುದಾಗಿ ತಿಳಿದುಬಂದಿದೆ.




ಗೌರಿ ಲಂಕೇಶ್‌ ಹತ್ಯೆ ಬಳಿಕ ಈ ಹತ್ಯೆ ಹಿಂದೆ ಆರ್.ಎಸ್.ಎಸ್. ವ್ಯಕ್ತಿಗಳ ಕೈವಾಡವಿದೆ ಎಂದು ಎಐಸಿಸಿ ಅಧ್ಯಕ್ಷರಾಗಿದ್ದ ರಾಹುಲ್‌ ಗಾಂಧಿ ಆರೋಪಿಸಿದ್ದರು. ಈ ಹಿನ್ನಲೆಯಲ್ಲಿ ರಾಹುಲ್‌ ಗಾಂಧಿ ವಿರುದ್ದ ಆರ್.ಎಸ್.ಎಸ್. ಕಾರ್ಯಕರ್ತರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.


ಈ ಪ್ರಕರಣದ ವಿಚಾರಣೆಗೆ ರಾಹುಲ್‌ ಗಾಂಧಿ ಇಂದು ಮುಂಬೈನ ನ್ಯಾಯಾಲಯದ ಮುಂದೆ ಹಾಜರಾಗಿದ್ದು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ರಾಹುಲ್‌ ಗಾಂಧಿ, ಯಾವುದೇ ನಿರ್ದಿಷ್ಟ ವ್ಯಕ್ತಿಗಳನ್ನು ಗುರಿಯಾಗಿಸಿ ಈ ಹೇಳಿಕೆ ನೀಡಿರಲಿಲ್ಲವೆಂದು ಅವರ ಪರ ವಕೀಲರು ಮಾಡಿರುವ ವಾದವನ್ನು ಪರಿಗಣಿಸಿ  ಕೋರ್ಟ್ ರಾಹುಲ್ ಗಾಂಧಿಗೆ ಬಿಗ್‌ ರಿಲೀಫ್‌ ನೀಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಹೋದರನ ಗುಣಗಾನ ಮಾಡಿದ ಪ್ರಿಯಾಂಕ ಗಾಂಧಿ