Publish Date: Wed, 24 Jan 2024 (16:26 IST)
Updated Date: Wed, 24 Jan 2024 (18:29 IST)
ಬೆಂಗಳೂರು : ರೌಡಿಶೀಟರ್ ಒಬ್ಬನ ಮನೆಗೆ ನುಗ್ಗಿ ಆತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ವಿವೇಕ್ ನಗರ ಕೊಳೆಗೇರಿ ಪ್ರದೇಶದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ರೌಡಿ ಸತೀಶ್ ಅಲಿಯಾಸ್ ಮಿಲ್ಟ್ರಿ ಸತೀಶ್ ಕೊಲೆಯಾದ ವ್ಯಕ್ತಿ.
ಮೃತ ಸತೀಶ್ ವಿರುದ್ದ ಹತ್ಯೆ ಪ್ರಯತ್ನ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದವು. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಆತನನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಭೇಟಿ ನೀಡಿರುವ ವಿವೇಕ್ ನಗರ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.
geetha
Publish Date: Wed, 24 Jan 2024 (16:26 IST)
Updated Date: Wed, 24 Jan 2024 (18:29 IST)