Publish Date: Mon, 31 Oct 2016 (14:43 IST)
Updated Date: Mon, 31 Oct 2016 (18:15 IST)
ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆಗೈದ ಹಂತಕರು ಆರೆಸ್ಸೆಸ್ ಮುಖಂಡರು ಮತ್ತು ಬಿಜೆಪಿ ಮುಖಂಡರನ್ನು ಗುರಿಯಾಗಿಸಿ ಹತ್ಯೆ ಮಾಡುವ ಸಂಚು ರೂಪಿಸಿದ್ದರು ಎನ್ನುವುದು ಪೊಲೀಸ್ ವಿಚಾರಣೆ ವೇಳೆಯಲ್ಲಿ ಸ್ಫೋಟಕ ಮಾಹಿತಿಯನ್ನು ಬಾಯಿಬಿಟ್ಟಿದ್ದಾರೆ
ಮೈಸೂರಿನ ಬಿಜೆಪಿ ಸಂಸದ ಪ್ರತಾಪ್ ಸಿಂಹ್ ಅವರ ಹತ್ಯೆ ಮಾಡುವುದು ಗುರಿಯಾಗಿತ್ತು. ಅದಕ್ಕಾಗಿ ಎರಡು ಬಾರಿ ಪ್ರಯತ್ನಿಸಿದ್ದರೂ ಗುರಿ ವಿಫಲವಾಗಿತ್ತು ಎಂದು ತಿಳಿಸಿದ್ದಾರೆ.
ಪ್ರತಾಪ್ ಸಿಂಗ್ ಅವರ ಬಗ್ಗೆ ಸಾಕಷ್ಟು ಮಾಹಿತಿಯನ್ನು ಕಲೆಹಾಕಿದ್ದ ಹಂತಕರು ಅವರು ಯಾವ ಯಾವ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ ಎನ್ನುವ ವಿವರಣೆ ಕೂಡಾ ಸಂಗ್ರಹಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯದಲ್ಲಿ ಹಿಂದೂ ಮುಖಂಡರನ್ನು ಹತ್ಯೆ ಮಾಡಿ ಅಶಾಂತಿಯನ್ನು ಸೃಷ್ಟಿಸುವುದೇ ಅವರ ಗುರಿಯಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ