ಚಿತ್ರದುರ್ಗ : ಪೋಕ್ಸೋ ಪ್ರಕರಣ ಸಂಬಂಧ ಸೆಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿ ಮುರುಘಾಶ್ರೀಗೆ ಹೃದಯ ಸಮಸ್ಯೆ ಹಿನ್ನೆಲೆ ಅವರನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ. ಕರೋನರಿ ಆಂಜಿಯೋಗ್ರಾಮ್ ನಿಂದ ಬಳಲುತ್ತಿದ್ದಾರೆ ಎಂದು ಮುರುಘಾಶ್ರೀ ಪರ ವಕೀಲ ಮನವಿ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದ ನ್ಯಾಯಾಧೀಶರ ಸೂಚನೆ ಮೇರೆಗೆ ಶಿಫ್ಟ್ ಮಾಡಲಾಗಿದೆ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲು ಕೋರ್ಟ್ ಸೂಚನೆ ನೀಡಿದಂತೆ ಅವರನ್ನು ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಮಡು ಹೋಗಲಾಗಿದೆ.