ಹೈಕಮಾಂಡ್ ದೆಹಲಿಗೆ ನನ್ನನ್ನು ದೆಹಲಿಗೆ ಕರೆದಿಲ್ಲ. ಅದು ಮಾಧ್ಯಮದಲ್ಲಿ ಮಾತ್ರ ಬಂದಿರುವುದು. ನನ್ನ ವೈಯಕ್ತಿಕ ಕೆಲಸದ ನಿಮಿತ್ತವಾಗಿ ದೆಹಲಿಗೆ ಭೇಟಿ ನೀಡಿದ್ದೆ. ಇಲಾಖೆಯ ಕೆಲಸದ ನಿಮಿತ್ತ ದೆಹಲಿಗೆ ಹೊಗಿದ್ದೆ ನಾಳೆಯೂ ಕೂಡಾ ಹೋಗುತ್ತೇನೆ ಎಂದು ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.
ಕಲಬುರಗಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು ನಿಜ. ಮೂರು ನಾಲ್ಕು ತಿಂಗಳ ಹಿಂದೆ ಅಲ್ಲಿಗೆ ಭೇಟಿ ನೀಡಿದ್ದೆ. ಕೆಆರ್ ಎಸ್ ಜಲಾಶಯಕ್ಕೆ ಅಪಾಯವಿದೆ ಎನ್ನುವ ಹಿನ್ನಲೆಯಲ್ಲಿ ಅಕ್ರಮ ಗಣಿಗಾರಿಕೆ ಸ್ಥಗಿತಗೊಳಿಸಲಾಗಿದೆ. ನಿನ್ನೆ ಬೆಬಿ ಬೆಟ್ಟಕ್ಕೆ ನಮ್ಮ ಹಿರಿಯ ಅಧಿಕಾರಿಗಳನ್ನು ಕಳಿಸಿದ್ದೆವು. ಎಲ್ಲೆಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಅಲ್ಲಿ ಸರ್ವೆ ಮಾಡಿಸಿ ದಂಡ ಹಾಕಲಾಗಿದೆ ಎಂದರು,
ಸಂಸದೆ ಸುಮಲತಾ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಅವಹೇಳನಕಾರಿ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ನಿರಾಣಿ, ಯಾವುದೇ ಪಕ್ಷದ ನಾಯಕರು ಈ ರೀತಿಯ ಹೇಳಿಕೆ ಕೊಡಬಾರದು. ಯಾರು ಕೂಡಾ ಇಂತಹ ಶಬ್ದಗಳು ಬರಬಾರದು ಎಂದರು.