Select Your Language

Notifications

webdunia
webdunia
webdunia
webdunia

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

Murughashree POCSO Case, Chitradurga Murugha Mat Seer Sexual Abuse Case, Lingayat Swamiji Sexual Abuse Case

Sampriya

ಚಿತ್ರದುರ್ಗ , ಬುಧವಾರ, 26 ನವೆಂಬರ್ 2025 (15:11 IST)
ಚಿತ್ರದುರ್ಗ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಸಂಬಂಧ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಬಿಗ್‌ ರಿಲೀಫ್ ಸಿಕ್ಕಿದೆ. 

ಇಂದು ಪ್ರಕರಣದ ತೀರ್ಪನ್ನು ಪ್ರಕಟಿಸಿದ ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯವು ಮಹತ್ವದ ಆದೇಶ ನೀಡಿದೆ. 

ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್ ಇವತ್ತಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಅದರಂತೆ ಇದೀಗ ಪೋಕ್ಸೋದ ಮೊದಲ ಪ್ರಕರಣದಲ್ಲಿ ಮುರುಘಾಶ್ರೀ ಅವರು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದ್ದಾರೆ.

ಇದೀಗ ಶ್ರೀಗಳು ನಿರಪರಾಧಿ ಎಂದು ನ್ಯಾಯಾಧೀಶ ಗಂಗಾಧರ್ ಚನ್ನಬಸಪ್ಪ ಹಡಪದ ತೀರ್ಪು ಪ್ರಕಟಿಸಿದ್ದಾರೆ. 

ಪೊಲೀಸ್ ಮೂಲದಿಂದ ಸಲ್ಲಿಕೆಯಾದ ಚಾರ್ಜ್​ಶೀಟ್​ನ ಅಂಶಗಳನ್ನ ನೋಡೋದಾದರೆ, ಒಟ್ಟು 694 ಪುಟಗಳ ಚಾರ್ಜ್​​​ಶೀಟ್. ಪೋಕ್ಸೋ, ಅಟ್ರಾಸಿಟಿ, ಧಾರ್ಮಿಕ ಕೇಂದ್ರ ದುರುಪಯೋಗ ಕಾಯ್ದೆಯಡಿ ಶ್ರೀಗಳ ವಿರುದ್ಧ ಕೇಸ್ ದಾಖಲಾಗಿತ್ತು. 

Share this Story:

Follow Webdunia kannada

ಮುಂದಿನ ಸುದ್ದಿ

ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ: ಸಂಗಾತಿ ಬಂಧನ