Select Your Language

Notifications

webdunia
webdunia
webdunia
webdunia

ಮುಸ್ಲಿಂ ಮೂಲಭೂತವಾದಿಗಳು ಕಾಂಗ್ರೆಸ್ ಪ್ರಣಾಳಿಕೆ ಸಿದ್ದಪಡಿಸಿದ್ದಾರೆ : ಬಿಸ್ವಾ ಶರ್ಮಾ

ಮುಸ್ಲಿಂ ಮೂಲಭೂತವಾದಿಗಳು ಕಾಂಗ್ರೆಸ್ ಪ್ರಣಾಳಿಕೆ ಸಿದ್ದಪಡಿಸಿದ್ದಾರೆ : ಬಿಸ್ವಾ ಶರ್ಮಾ
ಬೆಂಗಳೂರು , ಬುಧವಾರ, 3 ಮೇ 2023 (11:57 IST)
ಬೆಂಗಳೂರು : ಕಾಂಗ್ರೆಸ್ ಮುಸ್ಲಿಮರ ಓಲೈಕೆಗಾಗಿ ಬಜರಂಗದಳ ನಿಷೇಧದ ಬಗ್ಗೆ ಹೇಳಿದೆ. ಇದು ಪಿಎಫ್ಐ ಪ್ರಚೋದಿತ ಪ್ರಣಾಳಿಕೆ.
 
ಪಿಎಫ್ಐ ಮನಸ್ಥಿತಿಯವರು, ಮುಸ್ಲಿಂ ಮೂಲಭೂತವಾದಿ ಮನಸ್ಥಿತಿಯವರು ರಚಿಸಿರುವ ಪ್ರಣಾಳಿಕೆ ಎಂದು ಅಸ್ಸಾಂನ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಟೀಕಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ನೀಡಿರುವಂತಹ ಗ್ಯಾರಂಟಿಗಳ ಬಗ್ಗೆ ವಾಗ್ದಾಳಿ ನಡೆಸಿರುವ ಶರ್ಮಾ, ಈಗಾಗಲೇ ಪಿಎಫ್ಐ ಬ್ಯಾನ್ ಆಗಿದೆ. ಈಗ ಪಿಎಫ್ಐ ಬ್ಯಾನ್ ಮಾಡುತ್ತೇವೆ ಎನ್ನುವುದರಲ್ಲಿ ಏನು ಅರ್ಥ ಇದೆ? ಇದರ ಅರ್ಥ ಇಷ್ಟೇ.

ಅವರು ಪಿಎಫ್ಐ ಬ್ಯಾನ್ ಮಾಡಿದ್ದಾರೆ, ನಾವು ಅದಕ್ಕೆ ಪರ್ಯಾಯವಾಗಿ ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದು ಹೇಳಲು ಹೊರಟಿದ್ದಾರೆ. ಈ ಮೂಲಕ ಮುಸ್ಲಿಮರ ಓಲೈಕೆ ಮಾಡಲು ಕಾಂಗ್ರೆಸ್ ಹೊರಟಿದೆ ಎಂದು ಕಿಡಿಕಾರಿದರು. 

 

Share this Story:

Follow Webdunia kannada

ಮುಂದಿನ ಸುದ್ದಿ

ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ಶರದ್‌ ಪವಾರ್‌ ರಾಜೀನಾಮೆ