ಪುತ್ರ ವಿಯೋಗದಿಂದ ಬಳಲುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಂದು ಮುಸ್ಲಿಂ ಧರ್ಮಗಳು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.
ಕಳೆದ ತಿಂಗಳು ರಾಕೇಶ್ ಸಿದ್ದರಾಮಯ್ಯ ಅಕಾಲಿಕ ಮರಣ ಹೊಂದಿದ್ದರು. ಆದರೆ, ಸಿದ್ದರಾಮಯ್ಯನವರನ್ನು ಭೇಟಿಯಾಗಿ ಸಾಂತ್ವನ ಹೇಳಲು ಸಾಧ್ಯವಾಗಿರಲಿಲ್ಲ. ಆದ್ದರಿಂದ, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದಾಗಿ ಮುಸ್ಲಿಂ ಧರ್ಮಗುರುಗಳು ತಿಳಿಸಿದ್ದಾರೆ.
ಬೆಲ್ಜಿಯಂ ಪ್ರವಾಸದಲ್ಲಿದ್ದ ರಾಕೇಶ್ ಪ್ಯಾಂಕ್ರಿಯಸ್ ರೋಗದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಪುತ್ರನ ಆರೋಗ್ಯ ವಿಚಾರಿಸಲು ಹೋದ ಸಿಎಂ ಸಿದ್ದರಾಮಯ್ಯ ಮರೆಯಲಾಗದ ಆಘಾತ ಅನುಭವಿಸಿದ್ದರು.
ರಾಕೇಶ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರು ನಗರ ಅಘೋಷಿತ ಬಂದ್ ಕರೆ ನೀಡಿದಂತಾಗಿತ್ತು. ಅನೇಕ ಹಿರಿಯ ರಾಜಕಾರಣಿಗಳು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಸಾಂತ್ವನ ಹೇಳಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ