Select Your Language

Notifications

webdunia
webdunia
webdunia
webdunia

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

ದಕ್ಷಿಣ ಕನ್ನಡ ಜಿಲ್ಲೆ

Sampriya

ಮಂಗಳೂರು , ಮಂಗಳವಾರ, 27 ಮೇ 2025 (21:57 IST)
ಮಂಗಳೂರು: ಇಂದು ಬಂಟ್ವಾಳದಲ್ಲಿ ನಡೆದ ಮುಸ್ಲಿಂ ಯುವ ಸಾವು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯದಂತೆ ಜಾರಿ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಮಂಗಳವಾರ (ಮೇ 27) ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು.

ಪರಿಣಾಮ ಕೊಳತ್ತಮಜಲು ನಿವಾಸಿ ರಹೀಮ್ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈಚೆಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಚ್ಚಿಬೀಳಿಸಿದ ಸುಹಾಸ್ ಹತ್ಯೆ ಪ್ರಕರಣದ ಬೆನ್ನಲ್ಲೇ ಈ ಹತ್ಯೆ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ