ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Sampriya
ಮಂಗಳವಾರ, 27 ಮೇ 2025 (21:57 IST)
ಮಂಗಳೂರು: ಇಂದು ಬಂಟ್ವಾಳದಲ್ಲಿ ನಡೆದ ಮುಸ್ಲಿಂ ಯುವ ಸಾವು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯದಂತೆ ಜಾರಿ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಮಂಗಳವಾರ (ಮೇ 27) ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು.

ಪರಿಣಾಮ ಕೊಳತ್ತಮಜಲು ನಿವಾಸಿ ರಹೀಮ್ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈಚೆಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಚ್ಚಿಬೀಳಿಸಿದ ಸುಹಾಸ್ ಹತ್ಯೆ ಪ್ರಕರಣದ ಬೆನ್ನಲ್ಲೇ ಈ ಹತ್ಯೆ ನಡೆದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ರಾಹಕರಿಗೆ ಗುಡ್‌ನ್ಯೂಸ್‌: ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದಲೇ ಕೊಂಚ ಅಗ್ಗ

ಆರ್ ಎಸ್ಎಸ್ ಪಂಥಸಂಚಲನಕ್ಕೆ ಅನುಮತಿ ಬೇಕು, ಎಂಇಎಸ್ ಪುಂಡರಿಗೆ ಇದು ಅಪ್ಲೈ ಆಗಲ್ವಾ

ಮತ್ತೊಂದು ಕಾಲ್ತುಳಿತ: ಇತಿಹಾಸ ಪ್ರಸಿದ್ಧ ಕ್ಷೇತ್ರದಲ್ಲಿ ದೇವರದರ್ಶನದ ನೂಕುನುಗ್ಗಲಿನಲ್ಲಿ 9 ಮಂದಿ ಸಾವು

ಮೋದಿ ವಿರುದ್ಧ ಸದಾ ಕೆಂಡಕಾರುತ್ತಿದ್ದ ಸಂಜಯ್ ರಾವತ್ ಗೆ ಏನಾಗಿದೆ ನೋಡಿ: ಗಂಭೀರ ಸಮಸ್ಯೆಯಲ್ಲಿ ನಾಯಕ

ಡೆಡ್‍ಲೈನ್ ಸಾಯುತ್ತಿದೆಯೇ ಹೊರತು ಅಭಿವೃದ್ಧಿ ಆಗುತ್ತಿಲ್ಲ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments