Publish Date: Wed, 27 Oct 2021 (18:08 IST)
Updated Date: Wed, 27 Oct 2021 (18:11 IST)
ಬಾಂಗ್ಲಾದೇಶದ ಅಲ್ಪಸಂಖ್ಯಾತರಾದ ಹಿಂದೂಗಳು ಮತ್ತು ಅವರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡಿಸಿ ಬೃಹತ್ ಮಾನವ ಸರಪಳಿ ರಚಿಸಿ ಮುಸ್ಲಿಮರು ಪ್ರತಿಭಟನೆ ನಡೆಸಿದರು.
ನಗರದ ನಂದಿದುರ್ಗ ರಸ್ತೆಯ ಖುದ್ದೂಸ್ ಸಾಬ್ ಈದ್ಗಾ ಮೈದಾನದ ಬಳಿ ಜುಮ್ಮಾ ಮಸೀದಿ ಆಡಳಿತ ಮಂಡಳಿ ನೇತೃತ್ವದಲ್ಲಿ ಜಮಾಯಿಸಿದ ಮುಸ್ಲಿಮ್ ಸಮುದಾಯದ ಧರ್ಮ ಗುರುಗಳು, ಚಿಂತಕರು, ಸಮುದಾಯದ ಮುಖಂಡರು, ಅಲ್ಪಸಂಖ್ಯಾತರನ್ನು ರಕ್ಷಿಸುವ ಕೆಲಸ ಆಗಬೇಕು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಟಿ ಮಾರುಕಟ್ಟೆಯ ಜಾಮೀಯಾ ಮಸೀದಿ ಮೌಲಾನ ಮಖ್ಸೂದ್ ಇಮ್ರಾನ್ ರಶಾದಿ, ಯಾವುದೇ ಒಂದು ದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರ ರಕ್ಷಣೆ ಆಯಾ ಸರಕಾರಗಳ ಹೊಣೆ. ಹೀಗಾಗಿ ಬಾಂಗ್ಲಾದಲ್ಲಿ ನೆಲೆಸಿರುವ ಹಿಂದೂಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಹತ್ತಿಕ್ಕಬೇಕು ಎಂದು ಒತ್ತಾಯಿಸಿದರು.