Publish Date: Fri, 03 Mar 2023 (09:13 IST)
Updated Date: Fri, 03 Mar 2023 (09:57 IST)
ಉಡುಪಿ : ಕಾರ್ಕಳದ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬೇನಾಮಿ ಆಸ್ತಿ ಆರೋಪ ಮಾಡಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಚುನಾವಣೆ ಘೋಷಣೆ ಆಗುವ ಮೊದಲೇ ಕಾರ್ಕಳದಲ್ಲಿ ಮುತಾಲಿಕ್ ಮತ್ತು ಸುನಿಲ್ ಕುಮಾರ್ ನಡುವೆ ಆರೋಪ ಪ್ರತ್ಯಾರೋಪಗಳು ಶುರುವಾಗಿದೆ.
ಎರಡು ತಿಂಗಳಿನಿಂದ ಮುತಾಲಿಕ್ ನಿರಂತರವಾಗಿ ಸುನಿಲ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ನಕಲಿ ಹಿಂದುತ್ವ, ಭ್ರಷ್ಟಾಚಾರ ಅಂತಾ ಆರೋಪಿಸುತ್ತಿದ್ದವರು ಇದೀಗ ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪ ಮಾಡಿದ್ದಾರೆ.