Publish Date: Tue, 07 Feb 2023 (11:32 IST)
Updated Date: Tue, 07 Feb 2023 (10:44 IST)
ಬೆಂಗಳೂರು : ಕರ್ನಾಟಕದಲ್ಲಿ 15,000 ಮೆಗಾ ವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ `ಇಂಡಿಯನ್ ಎನರ್ಜಿ ವೀಕ್-2023′ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರಿಂದು ಮಾತನಾಡಿದರು.
ದೇಶದ ಶೇ.50 ರಷ್ಟು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ನವೀಕರಿಸಬಹುದಾದ ಇಂಧನವನ್ನು ಸಂಗ್ರಹಿಸಲು ಪಂಪ್ ಸ್ಟೋರೇಜ್ ಸೇರಿದಂತೆ ವಿವಿಧ ರೀತಿಯ ಸಂಗ್ರಹಣೆಯತ್ತ ರಾಜ್ಯ ಗಮನ ಹರಿಸುತ್ತಿದೆ ಎಂದು ಹೇಳಿದರು.