ನಾಮಪತ್ರ ಸಲ್ಲಿಸಲ್ಲ ಎಂದವರಿಗೆ ಮೆರವಣಿಗೆ ಮೂಲಕ ಉತ್ತರಿಸಿದ್ದೇನೆ: ಕೆ ಎಸ್‌ ಈಶ್ವರಪ್ಪ

Sampriya
ಶುಕ್ರವಾರ, 12 ಏಪ್ರಿಲ್ 2024 (19:26 IST)
Photo Courtesy X
ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಬಿಜೆಪಿಯಿಂದ ಪುತ್ರನಿಗೆ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಇಂದು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಪತ್ನಿ ಹಾಗೂ ಬೆಂಬಲಿಗರ ಸಮ್ಮುಖದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ  ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಕೆ.ಎಸ್‌. ಈಶ್ವರಪ್ಪ ನಾಮಪತ್ರ ಸಲ್ಲಿಸಿದರು.

ಒಂದೇ ದಿನ ಎರಡನೇ ಬಾರಿಗೆ ಈಶ್ವರಪ್ಪ ಅವರು ಉಮೇದುವಾರಿಕೆ ಸಲ್ಲಿಸಿದ್ದಾರೆ. ಬೆಳಗ್ಗೆ ಈಶ್ವರಪ್ಪ ಪರವಾಗಿ ಅವರ ಅತ್ಯಾಪ್ತ ಹಾಗೂ ಮಾಜಿ ಪಾಲಿಕೆ ಸದಸ್ಯ ವಿಶ್ವಾಸ್ ನಾಮಪತ್ರ ಸಲ್ಲಿಸಿದ್ದರು. ಈಶ್ವರಪ್ಪ ನಾಮಪತ್ರ ಸಲ್ಲಿಕೆ ವೇಳೆ ಪತ್ನಿ ಜಯಲಕ್ಷ್ಮಿ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಮಾಜಿ ಪಾಲಿಕೆ ಸದಸ್ಯ ವಿಶ್ವಾಸ್ ಇದ್ದರು.

ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮದ ಜತೆ ಮಾತನಾಡಿದ ಅವರು,  ಶಿವಮೊಗ್ಗ ಲೋಕಸಭಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಒಟ್ಟು  8 ಕ್ಷೇತ್ರದಿಂದ ಜನ ಬಂದಿದ್ದು, ಮನೆ ಮನೆಗೆ ಕಾರ್ಯಕರ್ತರು ಹೋಗಿ ಹಿಂದುತ್ವಕ್ಕೆ ಅಗಿರುವ ಅನ್ಯಾಯದ ಬಗ್ಗೆ ಹೇಳುತ್ತೇವೆ.

ಶಿವಮೊಗ್ಗದ ಜನ ನನಗೆ ಬೆಂಬಲ ಕೊಡುತ್ತಾರೆ. 25 ಸಾವಿರ ಜನ ಬಂದು ನನಗೆ ಬೆಂಬಲ ಸೂಚಿಸಿದ್ದಾರೆ. ನಾಮಪತ್ರ ಸಲ್ಲಿಸಲ್ಲ ಎಂದವರಿಗೆ ಮೆರವಣಿಗೆಯೇ ಉತ್ತರ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments