Webdunia - Bharat's app for daily news and videos

Install App

ಗೆಳೆಯನನ್ನೆ ಕೊಲೆ ಮಾಡಿಸಿದ !

Webdunia
ಶುಕ್ರವಾರ, 27 ಮೇ 2022 (08:53 IST)
ಹಾಸನ : ಹಣಕಾಸಿನ ವಿಷಯಕ್ಕೆ ಗೆಳೆಯನನ್ನೆ ದುಷ್ಕರ್ಮಿ ಕೊಲೆ ಮಾಡಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.

ಮೇ.10ರ ರಾತ್ರಿ ಹಾಸನದ ಹೊಸ ಬಸ್ ನಿಲ್ದಾಣದ ಬಳಿ ಆಟೋಚಾಲಕ ಗಿರೀಶ್ ಕೊಲೆ ನಡೆದಿದ್ದು, ಪೊಲೀಸರ ನಿದ್ದೆಗೆಡಿಸಿತ್ತು. ಆ ಕ್ಷಣಕ್ಕೆ ಆರೋಪಿಗಳು ಯಾರೂ ಎಂದೇ ಪತ್ತೆಯಾಗಿರಲಿಲ್ಲ. ನಿಂತಿದ್ದ ಆಟೋ ಒಳಗಡೆಯೇ ಗಿರೀಶ್ನನ್ನು ಕೊಲೆ ಮಾಡಲಾಯಿತು.

ಈ ಹಿನ್ನೆಲೆ ಪೊಲೀಸರು ಆರೋಪಿಗಳನ್ನು ಹುಡುಕಿಕೊಂಡು ಹೋಗಿದ್ದು, ಗಿರೀಶ್ ಗೆಳೆಯರೇ ಕೊಲೆಗಾರರು ಎಂಬುದು ತಿಳಿದುಬಂದಿದೆ.

ಕೊಲೆಯಾದ ಹೊಸಕೊಪ್ಪಲು ಆಟೋ ಚಾಲಕ ಗಿರೀಶ್ ಮತ್ತು ಪ್ರಮುಖ ಆರೋಪಿ ವಾಸು ಇಬ್ಬರು ಬೆಂಗಳೂರಿನಲ್ಲಿ ಆಟೋ ಚಾಲಕರಾಗಿದ್ದರು. ಹಾಗಾಗಿ ಇಬ್ಬರ ನಡುವೆ ಸ್ನೇಹದ ಜೊತೆಗೆ ಹಣಕಾಸಿನ ವ್ಯವಹಾರವೂ ಇತ್ತು. ಕೊರೊನಾ ಹಿನ್ನೆಲೆಯಲ್ಲಿ ಇಬ್ಬರೂ ಬೆಂಗಳೂರು ಬಿಟ್ಟು ಹಾಸನಕ್ಕೆ ಬಂದಿದ್ದರು. ಆಗಲೂ ಇಬ್ಬರ ಸ್ನೇಹ ಮುಂದುವರಿದಿತ್ತು.

ಕೊಲೆಯಾದ ಗಿರೀಶ್ ಬೆಳಗ್ಗೆ ಹಿಮತ್ ಸಿಂಗ್ ಕಾರ್ಖಾನೆಯಲ್ಲಿ ಕೆಲಸ ಮಾಡಿ, ರಾತ್ರಿ ವೇಳೆ ಆಟೋ ಓಡಿಸುತ್ತಿದ್ದ. ವಾಸು ನಗರದ ಎಪಿಎಂಪಿಯಲ್ಲಿ ಸುಂಕ ವಸೂಲಿ ಕೆಲಸ ಮಾಡುತ್ತಿದ್ದ. ಇಬ್ಬರ ನಡುವೆ ದುಡ್ಡು ಕೊಡುವ, ತೆಗೆದುಕೊಳ್ಳುವ ಸಂಬಂಧ ಮನಸ್ತಾಪವಿತ್ತು. ಇದೇ ಕಾರಣಕ್ಕೆ ಇಬ್ಬರು ಜಗಳ ಮಾಡಿಕೊಂಡಿದ್ದರು. ಈ ವೈಷಮ್ಯದಿಂದಲೇ ಗಿರೀಶ್ ಹತ್ಯೆಯಾಗಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments