Webdunia - Bharat's app for daily news and videos

Install App

ನನಗೆ ಸೋನಿಯಾ, ರಾಹುಲ್ ಗಾಂಧಿ ನಾಯಕರು: ಬಿ.ಕೆ. ಹರಿಪ್ರಸಾದ್‌ಗೆ ಸಿಎಂ ಟಾಂಗ್

Webdunia
ಶುಕ್ರವಾರ, 26 ಫೆಬ್ರವರಿ 2016 (17:14 IST)
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಸಂಸ್ಕ್ರತಿ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್‌ಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ನನಗೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ನಾಯಕರಾಗಿದ್ದಾರೆ ಎಂದು ಹೇಳಿದ್ದಾರೆ.
 
ರಾಜ್ಯ ಸರಕಾರಕ್ಕೆ ಮೇಜರ್ ಸರ್ಜರಿ ಮಾಡುವ ಅಗತ್ಯವಿದೆ ಎಂದು ಹೇಳಿಕೆ ನೀಡಿದ್ದ ಬಿ.ಕೆ.ಹರಿಪ್ರಸಾದ್, ಮುಖ್ಯಮಂತ್ರಿ ಬದಲಾವಣೆ ಮಾಡುವ ಕುರಿತಂತೆ ಪರೋಕ್ಷ ಹೇಳಿಕೆ ನೀಡಿದ್ದರು.
 
ಹರಿಪ್ರಸಾದ್ ಹೇಳಿಕೆಯಿಂದ ಆಕ್ರೋಶಗೊಂಡಿರುವ ಸಿಎಂ ಸಿದ್ದರಾಮಯ್ಯ, ನನ್ನ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಇತರರಿಂದ ಸಲಹೆ ಪಡೆಯುವ ಅಗತ್ಯ, ಅನಿವಾರ್ಯತೆ ನನಗಿಲ್ಲ ಎಂದು ಗುಡುಗಿದ್ದರು.
 
ನನಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಾಯಕರಿದ್ದಂತೆ, ಭೈರತಿ ಸುರೇಶ್ ಕೂಡಾ ಕಾಂಗ್ರೆಸ್ ಪಕ್ಷದ ಸಹ ಸದಸ್ಯರಾಗಿದ್ದಾರೆ ಎನ್ನುವುದು ಸತ್ಯವಲ್ಲವೇ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments