Webdunia - Bharat's app for daily news and videos

Install App

ನನ್ನ ಹೇಳಿಕೆ ತಿರುಚುವ ಕೆಲಸ ನಡೆದಿದೆ

Webdunia
ಗುರುವಾರ, 9 ಫೆಬ್ರವರಿ 2023 (18:35 IST)
ಮುಂದಿನ ಮುಖ್ಯಮಂತ್ರಿ ಮಾಡಲು ಹುನ್ನಾರ ನಡೆಸಿದೆ ಎಂಬುದು ನನ್ನ ಹೇಳಿಕೆ ಆಗಿತ್ತು. ನನ್ನ ಹೇಳಿಕೆಯಲ್ಲಿ ಗೊಂದಲ ಇಲ್ಲ, ಸ್ಪಷ್ಟತೆ ಇತ್ತು ಅಂತಾ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್​​​​​ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ರಾಜ್ಯದ ಮೇಲೆ, ಅದರಲ್ಲೂ ನಾವೆಲ್ಲರೂ ಶ್ರದ್ಧೆ, ಭಕ್ತಿಯಿಂದ ನಡೆದುಕೊಳ್ಳುವ ಶ್ರೀ ಶೃಂಗೇರಿ ಪೀಠ, ಮತ್ತೂ ಅಲ್ಲಿನ ದೇವಾಲಯಗಳ ಮೇಲೆ ಪೇಶ್ವೆಗಳಿಂದ ಪೈಶಾಚಿಕ ದಾಳಿ ನಡೆದಿತ್ತು. ಇದು ಇತಿಹಾಸ. ಈ ಇತಿಹಾಸವನ್ನು ತಿರುಚಿ ಹೇಳುವ ಅಗತ್ಯ ನನಗಿಲ್ಲ.ನಾನು ಹೇಳಿದ್ದೇ ಒಂದು, ಕೆಲವರು ತಿರುಚಿ ಅಪಪ್ರಚಾರ ನಡೆಸುತ್ತಿರುವುದೇ ಇನ್ನೊಂದು. ಈ ಒಂದು ಇನ್ನೊಂದರ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಸತ್ಯಕ್ಕೂ ಸುಳ್ಳಿಗೂ ಇರುವಷ್ಟೇ ದೂರವಿದೆ. ಪಾಪ.. ಕೆಲವರಿಗೆ ತಿರುಚುವುದೇ ಕೆಲಸ, ಅದೇ ಅವರಿಗೆ ಸರ್ವಸ್ವ. ನಾನು ಏನು ಮಾಡಲಿ? ಸತ್ಯ ಹೇಳಿದ್ದೇನೆ, ಚರ್ಚೆಯಾಗಲಿ.
ಶಿವಾಜಿ ಮಹಾರಾಜರು, ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ ಮತ್ತು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನೇ ಬಿಡದವರು ಇವರು. ಇನ್ನು ನನ್ನನ್ನು ಬಿಟ್ಟಾರೆಯೇ? ಕೀಳು ನಿಂದನೆ, ಚಿತಾವಣೆಯಷ್ಟೇ ಇವರ ಆಯುಧಗಳು. ನಿಂದನೆ ಮತ್ತು ನಿಂದಕರ ಬಗ್ಗೆ ನಾನು ಅಂಜುವ ಪೈಕಿ ಅಲ್ಲ ಎಂದು​​​​ ಹೆಚ್​​.ಡಿ ಕುಮಾರಸ್ವಾಮಿ ಟ್ವೀಟ್​​ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments