Publish Date: Mon, 09 May 2022 (16:14 IST)
Updated Date: Mon, 09 May 2022 (16:15 IST)
ಡೆತ್ ನೋಟ್ ನಲ್ಲಿ ಬಿಜೆಪಿ ಮುಖಂಡರ ವಿರುದ್ಧ ವಂಚನೆ ಆರೋಪ ಮಾಡಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.
ಉದ್ಯಮಿ ಶರತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.
ಜಂಗಲ್ ಲಾಡ್ಜಸ್ ಮಾಲೀಕ ಹಾಗೂ ರೆಸಾರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ಅಪ್ಪಣ್ಣ ಹಾಗೂ ಪ್ರವೀಣ್ ವಂಚನೆ ಮಾಡಿದ್ದಾರೆ ಎಂದು ಶರತ್ ಡೆತ್ ನೋಟ್ ನಲ್ಲಿ ಆರೋಪಿಸಿದ್ದಾರೆ.
ಮೈಸೂರಿನ ಎನ್.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪ್ಪಣ್ಣ ಹಾಗೂ ಪ್ರವೀಣ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.