Select Your Language

Notifications

webdunia
webdunia
webdunia
webdunia

ನಿಗೂಢ ಸ್ಫೋಟ: ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಿ ಪರಿಶೀಲನೆ

ನಿಗೂಢ ಸ್ಫೋಟ: ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಿ ಪರಿಶೀಲನೆ
ಮೈಸೂರು , ಸೋಮವಾರ, 1 ಆಗಸ್ಟ್ 2016 (19:00 IST)
ಮೈಸೂರು ಕೋರ್ಟ್ ಶೌಚಾಲಯದಲ್ಲಿ ನಿಗೂಢ ಸ್ಫೋಟ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 
ಸಿಎಂ ಜೇಷ್ಠಪುತ್ರ ರಾಕೇಶ್ ಸಿದ್ದರಾಮಯ್ಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದ ಗೃಹ ಸಚಿವರು, ಮೈಸೂರು ಕೋರ್ಟ್‌‌ನಲ್ಲಿರುವ ಕಕ್ಷಿದಾರರು ಬಳಸುವ ಶೌಚಾಲಯದಲ್ಲಿ ಸ್ಫೋಟ ಸಂಭವಿಸಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಹಾಗೂ ಡಿಜಿಪಿ ಓಂ ಪ್ರಕಾಶ್ ಅವರು ಹಾಜರಿದ್ದರು.
 
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಸ್ಫೋಟದ ತೀವ್ರತೆ ಕಡಿಮೆ ಇದ್ದರು ಪರಿಣಾಮ ಮಾತ್ರ ಹೆಚ್ಚಿದೆ. ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ. ಆದರೆ, ಸ್ಫೋಟದಲ್ಲಿ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ತನಿಖೆಯ ನಂತರವಷ್ಟೇ ಸಂಪೂರ್ಣ ವಿವರ ಸಿಗಲಿದೆ ಎಂದು ತಿಳಿಸಿದರು.


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಣ್ಣಲ್ಲಿ ಮಣ್ಣಾದ ಸಿಎಂ ಜೇಷ್ಠಪುತ್ರ ರಾಕೇಶ್!