ರತ್ನಖಚಿತ ಸಿಂಹಾಸನ ಸಾರ್ವಜನಿಕ ವೀಕ್ಷಣೆಗೆ ಮುಕ್ತ

Webdunia
ಮಂಗಳವಾರ, 26 ಸೆಪ್ಟಂಬರ್ 2017 (17:19 IST)
ಮೈಸೂರು: ಯದುವಂಶದ ಅರಸರಿಗೆ ಬಳುವಳಿಯಾಗಿ ಬಂದ ವಿಜಯನಗರ ಅರಸರ ಕಾಲದ ರತ್ನಖಚಿತ ಸಿಂಹಾಸನ ಅಂಬಾವಿಲಾಸ ಅರಮನೆಯಲ್ಲಿ 2 ವರ್ಷದ ನಂತರ ಸಾರ್ವಜನಿಕ ವೀಕ್ಷಣೆಗೆ ಲಭ್ಯವಾಗಿದೆ. ಒಡೆಯರ್ ಮನೆತನದ ಸುಪರ್ದಿಯಲ್ಲಿರುವ ವಜ್ರ ವೈಢೂರ್ಯಗಳಿಂದ ಕೂಡಿದ ಈ ಸಿಂಹಾಸನ ಕಳೆದ ವರ್ಷ ದಸರಾ ಸಮಯದಲ್ಲಿ ಸಾರ್ವಜನಿಕ ವೀಕ್ಷಣೆಗೆ ಲಭ್ಯವಿರಲಿಲ್ಲ. ಆದರೆ ಈ ಬಾರಿ ರಾಜವಂಶಸ್ಥರು ವೀಕ್ಷಣೆಗೆ ಮುಕ್ತ ಅವಕಾಶ ಕಲ್ಪಿಸಿದ್ದಾರೆ.

ಸೆ.30ರವರೆಗೆ ರತ್ನಖಚಿತ ಸಿಂಹಾಸನ ದರ್ಶನಕ್ಕೆ ಲಭಿಸಲಿದೆ. ಅಧಿಕಾರ, ಘನತೆ, ಗಾಂಭೀರ್ಯ, ಪ್ರತಿಷ್ಠೆಯ ಸಂಕೇತವಾದ ಸಿಂಹಾಸನವನ್ನು ಸೆ. 15ರಂದು ಜೋಡಣೆ ಮಾಡಿದ ನಂತರ ಬಿಳಿ ಬಟ್ಟೆ ಹೊದಿಸಿ ಮುಚ್ಚಿಡಲಾಗಿತ್ತು. ದಸರಾ ಪ್ರಾರಂಭದ ದಿನ ಅದಕ್ಕೆ ಅಕ್ಷಿ, ಛತ್ರಿ ಹಾಗೂ ಕಳಶ ಜೋಡಣೆ ಮಾಡಿ ಒಡೆಯರ್ ಅವರು ಖಾಸಗಿ ದರ್ಬಾರ್ ಗೆ ಸಿಂಹಾಸನಾರೋಹಣ ಮಾಡಿದ ನಂತರ ಇದನ್ನು ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ.

ಅರಮನೆ ಮತ್ತು ರಾಜ್ಯ ಸರ್ಕಾರದ ನಡುವಿನ ವಿವಾದದಿಂದ 2 ವರ್ಷದಿಂದ ಸಿಂಹಾಸನವನ್ನು ರಾಜಮನೆತನದವರು, ಪ್ರವಾಸಿಗರು ಹಾಗೂ ಸಾರ್ವಜನಿಕರು ವೀಕ್ಷಿಸಲು ಅವಕಾಶ ನೀಡಿರಲಿಲ್ಲ. ಈ ಮಧ್ಯೆ ಕಳೆದ ವರ್ಷ ಅರಮನೆ ಆಡಳಿತ ಮಂಡಳಿ ನಿರ್ದೇಶಕರಾಗಿದ್ದ ಬಿ.ಜಿ.ಇಂದ್ರಮ್ಮ ಸಿಂಹಾಸನದ ಮೇಲೆ ಹೊದಿಸಿದ್ದ ಬಿಳಿ ಬಟ್ಟೆಯನ್ನು ತೆಗೆಯಲು ಹೋಗಿ ವಿವಾದಕ್ಕೀಡಾಗಿದ್ದರು.

ಸೆ.24ರಿಂದಲೇ ಸಿಂಹಾಸನ ವೀಕ್ಷಣೆಗೆ ಅವಕಾಶ ನೀಡಲಾಗಿದ್ದು, ಪ್ರವಾಸಿಗರು ಆಕರ್ಷಿತರಾಗಿದ್ದಾರೆ. ಅರಮನೆ ವೀಕ್ಷಣೆಗೆ ಪವೇಶ ದರ 50 ರೂ.ಇದ್ದು, ಸಿಂಹಾಸನ ವೀಕ್ಷಣೆಗೆ ಪ್ರತ್ಯೇಕವಾಗಿ 50 ರೂ. ಟಿಕೆಟ್ ಖರೀದಿಸಬೇಕು. ಪತ್ಯೇಕ ಟಿಕೆಟ್ ಖರೀದಿಸಿದವರಿಗೆ ಬಲಗೈಗೆ ಕೆಂಪು ಪಟ್ಟಿ(ರೆಡ್‍ಬ್ಯಾಂಡ್) ಕಟ್ಟಲಾಗುತ್ತೆ. ಇದನ್ನು ತೋರಿಸಿದರೆ ಮಾತ್ರ ಭದತ್ರಾ ಸಿಬ್ಬಂದಿ ಒಳಗೆ ಬಿಡುತ್ತಾರೆ. 2ಸಾವಿರಕ್ಕೂ ಹೆಚ್ಚು ಮಂದಿ ಮೊದಲ ದಿನ ಸಿಂಹಾಸನ ವೀಕ್ಷಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

ಮುಂದಿನ ಸುದ್ದಿ
Show comments