Select Your Language

Notifications

webdunia
webdunia
webdunia
webdunia

ಮೈಸೂರು ದಸರಾ: ಸರ್ಕಾರದ ಕ್ರಮ ಹಿಂಪಡೆಯುವಂತೆ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

ಮೈಸೂರು ದಸರಾ 2025

Sampriya

ಬೆಂಗಳೂರು , ಶನಿವಾರ, 6 ಸೆಪ್ಟಂಬರ್ 2025 (16:51 IST)
Photo Credit X
ಬೆಂಗಳೂರು: ಮೈಸೂರು  ದಸರಾ ಉದ್ಘಾಟನೆಗೆ ಸಾಹಿನಿ ಬಾನು ಮುಷ್ತಾಕ್ ಅವರನ್ನು  ಆಹ್ವಾನಿಸಿರುವುದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ್  ಅವರು  ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ.  ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಹಿಂದೂ ವಿರೋಧಿ ಭಾವನೆಯನ್ನು ಬಾನು ಅವರು ಹೊಂದಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ದು, ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆಯ ಸಂಪ್ರದಾಯವಿದೆ. ‘ಬಾನು
ಮುಷ್ತಾಕ್ ಹಿಂದೂ ವಿರೋಧಿ,‌ ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ’. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಅವರನ್ನು ಆಯ್ಕೆ ಮಾಡಿದೆ ಎಂದಿದ್ದಾರೆ.

ಇನ್ನೂ ಮನವಿಯಲ್ಲಿ ಮೈಸೂರಿನ ರಾಜಮನೆತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ. ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟಾಗಿದೆ. ಹೀಗಾಗಿ ಬಾನು ಮುಷ್ತಾಕ್​ರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶಿಸಲು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಸಿಕಾಂತ್ ಸೆಂಥಿಲ್ ಮಾನನಷ್ಟ ಮೊಕದ್ದಮೆಗೆಲ್ಲಾ ನಾನು ಹೆದರಲ್ಲ: ಜನಾರ್ಧನ ರೆಡ್ಡಿ