Select Your Language

Notifications

webdunia
webdunia
webdunia
webdunia

ಸಿಎಂ ಆಪ್ತ ಮರಿಗೌಡ ಬಂಧನಕ್ಕೆ ಶೋಭಾ ಕರಂದ್ಲಾಜೆ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು , ಸೋಮವಾರ, 4 ಜುಲೈ 2016 (15:23 IST)
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಮರಿಗೌಡ ಮತ್ತು ಅವರ ಬೆಂಬಲಿಗರನ್ನು ಕೂಡಲೇ ಬಂಧಿಸಬೇಕು ಎಂದು ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
 
ಬಿಜೆಪಿ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಮರಿಗೌಡ ಮತ್ತು ಅವರ ಬೆಂಬಲಿಗರು ಜಿಲ್ಲಾಧಿಕಾರಿ ಸಿ.ಶಿಖಾ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಲ್ಲದೆ, ಅವರನ್ನು ಕಾರಿನಿಂದ ಹೊರಗೆಳೆಯುವ ಪ್ರಯತ್ನ ನಡೆಸಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದು, ರಾಜ್ಯದಲ್ಲಿ ಜಿಲ್ಲಾಧಿಕಾರಿಗಳಿಗೆ ರಕ್ಷಣೆ ಇಲ್ಲದಿದ್ದರೆ ಸಾರ್ವಜನಿಕರ ಗತಿ ಏನು ಎಂದು ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ.
 
ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರೆ ಕಾರಣ. ಮುಖ್ಯಮಂತ್ರಿ ಬೆಂಬಲಿಗರು ಹಫ್ತಾ ವಸೂಲಿ ಮಾಡುತ್ತಿರುವ ಕುರಿತು ಅಧಿಕಾರಿಗಳೇ ನನಗೆ ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
 
ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಮರಿಗೌಡ ಮತ್ತು ಬೆಂಬಲಿಗರನ್ನು ಕೂಡಲೇ ಬಂಧಿಸಿ, ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಸೂಕ್ತ ರಕ್ಷಣೆ ನೀಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ಸಚಿವ ಸಂಪುಟ ಪುನಾರಚನೆ- ಸಂಭಾವ್ಯರ ಪಟ್ಟಿ