Select Your Language

Notifications

webdunia
webdunia
webdunia
webdunia

ಮೈಸೂರು ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

ಕನ್ನಡ ಪ್ರಾದೇಶಿಕ
ಮೈಸೂರು , ಗುರುವಾರ, 18 ಆಗಸ್ಟ್ 2016 (17:35 IST)
ಜಿಲ್ಲಾ ಪದಾಧಿಕಾರಿಗಳ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಸ್ಫೋಟವಾಗಿದೆ.
 
ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ಜಿಲ್ಲಾ ಪದಾಧಿಕಾರಿಗಳ ನೇಮಕ ಪಟ್ಟಿಯನ್ನು ರದ್ದುಗೊಳಿಸುವಂತೆ ಕಾರ್ಯಕರ್ತರು ಆಗ್ರಹಿಸಿದ್ದು, ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಅವರ ಸಮ್ಮುಖದಲ್ಲಿ ಕಾರ್ಯಕರ್ತರ ಭಿನ್ನಮತ ಸ್ಫೋಟವಾಗಿದೆ.
 
ಜಿಲ್ಲಾ ಪದಾಧಿಕಾರಿಗಳ ನೇಮಕ ಕುರಿತು ಪಕ್ಷದಲ್ಲಿ ಗೊಂದಲ ಸೃಷ್ಟಿಯಾಗಿದ್ದು, ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ನೀಡಿ ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ. 
 
ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ಕಾರ್ಯಕರ್ತರ ಅಸಮಾಧಾನ ಭುಗಿಲ್ಲೆದಿದ್ದು, ಕಾರ್ಯಕರ್ತರು ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಅವರಿಗೆ ಮುತ್ತಿಗೆ ಹಾಕಿದ ಘಟನೆಯೂ ನಡೆಯಿತು.
 
ಬಿಜೆಪಿ ಪದಾಧಿಕಾರಿಗಳ ಪಟ್ಟಿಯನ್ನು ಪರಿಷ್ಕರಣೆ ಸಂದರ್ಭದಲ್ಲಿ ತಮಗೆ ಬೇಕಾದವರಿಗೆ ಹುದ್ದೆ ನೀಡಿದ್ದು, ಪಕ್ಷಕ್ಕಾಗಿ ದುಡಿದವರನ್ನು ನಿರ್ಲಕ್ಷಿಸಲಾಗಿದೆ ಎಂದು ರಾಜ್ಯ ಬಿಜೆಪಿ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿತ್ತು. ಆದೆರ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇದೀಗ ಮೈಸೂರು ಜಿಲ್ಲಾ ಬಿಜೆಪಿ ಘಟಕದಲ್ಲಿಯೂ ಭಿನ್ನಮತ ಸ್ಫೋಟವಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ತವ್ಯದಲ್ಲಿದ್ದಾಗ ಚಲನಚಿತ್ರ ವೀಕ್ಷಣೆ; ರೆಡ್ ಹ್ಯಾಂಡ್ ಆಗಿ ಹಿಡಿದ ಸಚಿವ ಸಿಸೋಡಿಯಾ