ಮೈಸೂರು: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತ ಭಾರತ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್  ಅವರು ದಸರಾ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
 
									
			
			 
 			
 
 			
			                     
							
							
			        							
								
																	ಈ ಬರಿಯ ದಸರಾ ಕ್ರೀಡಾಕೂಟವು ಅಕ್ಟೋಬರ್ 3ರಿಂದ 6ವರೆಗೆ ನಡೆಯಲಿದ್ದು, ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ.
									
										
								
																	ಅ.3ರಂದು ಮಧ್ಯಾಹ್ನ 4.30ಕ್ಕೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯವರು ಚಾಲನೆ ನೀಡಲಿದ್ದಾರೆ.
ಇದೀಗ ಕ್ರೀಡಾಕೂಟದಲ್ಲಿ ವಿಶೇಷ ಆಕರ್ಷಣೆಯಾಗಿ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಹಾಕಿಯಲ್ಲಿ ಭಾರತಕ್ಕೆ ಕಂಚಿನ ಪದಕ ತಂದುಕೊಡುವಲ್ಲಿ ಪ್ರಮುಖರಾದ ತಂಡದ ನಾಯಕ ಹರ್ಮನ್ ಪ್ರೀತ್ ಭಾಗವಹಿಸಲಿದ್ದಾರೆ.