ವಿಶ್ವವಿಖ್ಯಾತ ಜಂಬೂಸವಾರಿಗೆ ಮೈಸೂರು ಸಜ್ಜು: ಆರನೇ ಬಾರಿ ಅಂಬಾರಿ ಹೊರಲಿರುವ ಅಭಿಮನ್ಯು

Sampriya
ಗುರುವಾರ, 2 ಅಕ್ಟೋಬರ್ 2025 (10:23 IST)
Photo Credit X
ಮೈಸೂರು: ಮೈಸೂರು ದಸರಾ ಜಂಬೂಸವಾರಿ ಇಂದು ನಡೆಯಲಿದೆ. ಸತತ ಆರನೇ ಬಾರಿ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದಾನೆ. 

ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಅರಮನೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಜಂಬೂಸವಾರಿ ಕಣ್ತುಂಬಿಕೊಳ್ಳಲು ಲಕ್ಷಾಂತರ ಜನ ಕಾತರರಾಗಿದ್ದಾರೆ.

415ನೇ ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಮೈಸೂರು ಸಜ್ಜಾಗಿದೆ. ಬೆಳಗ್ಗೆ 9:30ರಿಂದ 10ಕ್ಕೆ ಪಟ್ಟದ ಆನೆ, ಕುದುರೆ, ಹಸು ಮತ್ತು ಖಾಸಾ ಆಯುಧಗಳೊಂದಿಗೆ ಅರಮನೆ ವಾಹನಗಳಿಗೆ ಪೂಜೆ ಸಲ್ಲಿಸಲಾಗುತ್ತದೆ 

ಬೆಳಗ್ಗೆ 9:45ಕ್ಕೆ ವಜ್ರಮುಷ್ಠಿ ಕಾಳಗ ನಡೆಯಲಿದೆ. ಬೆಳಗ್ಗೆ 10:50ರಿಂದ 11:10ಕ್ಕೆ ಬನ್ನಿಪೂಜೆ ನಡೆಯಲಿದೆ. ಬಳಿಕ ಅರಮನೆ ಅಂಗಳದಲ್ಲಿರುವ ಭುವನೇಶ್ವರಿ ದೇಗುಲಕ್ಕೆ ವಿಜಯಯಾತ್ರೆ ನಡೆಯಲಿದೆ. ಬಳಿಕ ವಿಜಯಯಾತ್ರೆ ಅರಮನೆಗೆ ವಾಪಸ್ಸಾಗಲಿದೆ.

ಬೆಳಗ್ಗೆ 10ರಿಂದ 10:30ರ ಸುಮಾರಿಗೆ ಚಾಮುಂಡಿಬೆಟ್ಟದಿಂದ ತಾಯಿ ವಿಗ್ರಹ ಅರಮನೆಗೆ ಬರಲಿದೆ. ಮಧ್ಯಾಹ್ನ 1ರಿಂದ 1:8ರ ಶುಭ ಧನುರ್ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3:40ರ ಬಳಿಕ ಚಿನ್ನದ ಅಂಬಾರಿ ಕಟ್ಟಲಾಗುತ್ತೆ. ಸಂಜೆ 4:42ರಿಂದ 5:06 ಗಂಟೆಗೆ ಪುಷ್ಪಾರ್ಚನೆ ನೆರವೇರಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ನಡೆಯಲಿದ್ದು, ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಸಂಜೆ 7 ಗಂಟೆಗೆ ಪಂಜಿನ ಕವಾಯತು ನಡೆಯಲಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಮುಂದಿನ ಸುದ್ದಿ
Show comments