Webdunia - Bharat's app for daily news and videos

Install App

ಇಂದು ನಡೆಯಲಿರುವ ಮೈಸೂರು ಜಿ.ಪಂ. ಚುನಾವಣೆಯಲ್ಲಿ ಬಿಜೆಪಿಗೆ ಬಿಗ್ ಶಾಕ್ ನೀಡಿದ ಜೆಡಿಎಸ್

Webdunia
ಶನಿವಾರ, 23 ಫೆಬ್ರವರಿ 2019 (12:40 IST)
ಮೈಸೂರು : ಇಂದು ನಡೆಯಲಿರುವ ಮೈಸೂರು ಜಿಲ್ಲಾ ಪಂಚಾಯತ್‍ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯನ್ನು ಕೈಬಿಟ್ಟು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಿರ್ಧರಿಸುವುದರ ಮೂಲಕ ಬಿಜೆಪಿಗೆ ಬಿಗ್ ಶಾಕ್ ನೀಡಿದೆ.


ಮೈಸೂರು ಜಿ.ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನಾವು ಬಿಜೆಪಿಯವರಿಗೆ ಮಾತು ಕೊಟ್ಟಿದ್ದೇವೆ. ಅದಕ್ಕಾಗಿ ನಾವು ಬಿಜೆಪಿ ಜೊತೆ  ಮೈತ್ರಿ ಮುಂದುವರಿಸುವುದಾಗಿ ರೇಷ್ಮೆ ಖಾತೆ ಸಚಿವ  ಸಾ.ರಾ.ಮಹೇಶ್ ಹೇಳಿಕೆ ನೀಡಿದ್ದರು.


ಆದರೆ ಇದೀಗ ಜೆಡಿಎಸ್ ವರಿಷ್ಠ ದೇವೇಗೌಡರು,  ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡ ಮತ್ತು ಸಚಿವ ಸಾರಾ ಮಹೇಶ್‍ ಗೆ  ಮೈಸೂರು ಜಿಲ್ಲಾ ಪಂಚಾಯತ್‍ ನಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯನ್ನು ಕೈಬಿಟ್ಟು ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದ್ದರಿಂದ ಇಂದು ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್‍ ಗೆ ಅಧ್ಯಕ್ಷ ಸ್ಥಾನ, ಕಾಂಗ್ರೆಸ್‍ಗೆ ಉಪಾಧ್ಯಕ್ಷ ಸ್ಥಾನ ಎಂದು ನಿರ್ಣಯಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments