Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಭೇಟಿ: ಮೈಸೂರಿನಲ್ಲಿ ಹೈ ಅಲರ್ಟ್!

webdunia
bengaluru , ಶನಿವಾರ, 18 ಜೂನ್ 2022 (17:01 IST)
ಜೂನ್ 21 ರಂದು ವಿಶ್ವಯೋಗ ದಿನಾಚಾರಣೆಯಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಭದ್ರತಾ ಕಾರ್ಯಾಚರಣೆ ಚುರುಕುಗೊಂಡಿದ್ದು ಅಘೋಷಿಸಿತ ಹೈಅಲರ್ಟ್‌ ಜಾರಿಯಲ್ಲಿದೆ.
ಪ್ರಧಾನಿ ಮೋದಿ ಸಂಚರಿಸುವ ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದೆ. ಮರದ ಪೋಲ್ ಗಳ ಮೂಲಕ  ನಗರದ 100 ಅಡಿ ರಸ್ತೆ, ಏರ್ ಪೋರ್ಟ್ ರಸ್ತೆ, ಅರಮನೆ ಮುಂಭಾಗ, ಚಾಮುಂಡಿ ಬೆಟ್ಟದ ರಸ್ತೆಗಳಲ್ಲಿ ಸುಮಾರು 30 ಕಿ.ಮೀ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದೆ. ಪ್ರಧಾನಿ ಮೋದಿ ಸಂಚರಿಸುವ ವೇಳೆ ಈ ರಸ್ತೆಗಳು ಸಂಪೂರ್ಣ ಬಂದ್ ಆಗಲಿವೆ.
ರ್ಯಾಡಿಸನ್ ಬ್ಲೂ ಹೋಟೆಲ್‌ ನಲ್ಲಿ ಪ್ರಧಾನಿ ಮೋದಿ ವಾಸ್ತವ್ಯ ಹೂಡಲಿರುವ ಹಿನ್ನೆಲೆಯಲ್ಲಿ ಹೋಟೆಲ್‌ ಗೆ ಭದ್ರತಾ ಕಾರ್ಯಾಚರಣೆ ಚುರುಕುಗೊಂಡಿದ್ದು, ಹೋಟೆಲ್ ಮುಂಭಾಗಕ್ಕೆ ಡಾಗ್ ಹಾಗೂ ಬಾಂಬ್ ಸ್ಕ್ವಾಡ್ ದಳ ಬಂದಿಳಿದಿದ್ದು, ಇಡೀ ಕಟ್ಟಡದ ಹೊರ ಭಾಗದಲ್ಲಿ ಭದ್ರತಾ ತಪಾಸಣೆ ನಡೆಸಲಾಗುತ್ತಿದೆ. 
6 ತಂಡಗಳ ಸುಮಾರು 50 ಸಿಬ್ಬಂದಿಗಳು ತಪಾಸಣೆ ಕಾರ್ಯದಲ್ಲಿ ತೊಡಗಿದ್ದು, ಕಟ್ಟಡದ ಸುತ್ತ, ರಸ್ತೆ ಬದಿಗಳು ಹಾಗೂ ಪುಟ್ ಪಾತ್ ನಲ್ಲಿ ತಪಾಸಣೆ ನಡೆಸಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಠ್ಯ ಪರಿಷ್ಕರಣೆ ವಿರುದ್ದ ಕಳಹೆ ಮೊಳಗಿಸಿದ ಸಂಘಟನೆಗಳು!