Publish Date: Mon, 08 Jun 2020 (09:06 IST)
Updated Date: Mon, 08 Jun 2020 (09:08 IST)
ಬೆಂಗಳೂರು : ಲಾಕ್ ಡೌನ್ ನಿಂದ ಬಂದ್ ಆಗಿದ್ದ ಮೈಸೂರು ಅರಮನೆಯ ವೀಕ್ಷಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಕೊರೊನಾ ಭೀತಿ ಹಿನ್ನಲೆಯಲ್ಲಿ ಇಡೀ ರಾಜ್ಯವನ್ನು ಲಾಕ್ ಡೌನ್ ಮಾಡಲಾಗಿತ್ತು. ಆದಕಾರಣ ಪ್ರಸಿದ್ಧ ಮೈಸೂರು ಅರಮನೆಯ ವೀಕ್ಷಣೆಗೆ ನಿರ್ಬಂಧ ಹೇರಲಾಗಿತ್ತು. ಆದರೆ ಇದೀಗ ಅರಮನೆಯ ಪ್ರವೇಶಕ್ಕೆ ಸರ್ಕಾರ ಅನುಮತಿ ನೀಡಿದ್ದು, ಇಂದಿನಿಂದ ಮೈಸೂರು ಅರಮನೆಯ ವೀಕ್ಷಣೆ ಮಾಡಬಹುದೆಂದು ತಿಳಿಸಿದೆ. ಹಾಗೇ ದಿನಕ್ಕೆ 3,500 ಜನರಿಗೆ ಮಾತ್ರ ಅವಕಾಶ ನೀಡಬೇಕಾಗಿ ಸೂಚಿಸಿದೆ ಎನ್ನಲಾಗಿದೆ.