ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಸಿಎಂ ಆಪ್ತ ಕೆ.ಮರಿಗೌಡ ವಿರುದ್ಧ ಪ್ರಕರಣ ದಾಖಲಿಸಿ ಆತ ಜೈಲುವಾಸ ಅನುಭವಿಸಲು ಕಾರಮರಾಗಿದ್ದ ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರನ್ನು 20 ದಿನಗಳಲ್ಲಿ ಎರಡನೇಯ ಬಾರಿ ವರ್ಗಾವಣೆ ಮಾಡಲಾಗಿದೆ.
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರನ್ನು ಕೆಲ ದಿನಗಳ ಹಿಂದೆ ಸಮಾಜ ಕಲ್ಯಾಣ ಇಲಾಖೆ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿತ್ತು. ಆದರೆ, ಅವರ ವರ್ಗಾವಣೆಗೊಂಡ ಕೇವಲ 20 ದಿನಗಳಲ್ಲಿ ಪಿಯು ಇಲಾಖೆಯ ನಿರ್ದೇಶಕರಾಗಿ ಮತ್ತೆ ವರ್ಗಾವಣೆಗೊಳಿಸಲಾಗಿದೆ.
ತಹಶೀಲ್ದಾರ್ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಕೆ.ಮರಿಗೌಡ ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿದ್ದರು. ಈ ಕುರಿತು ಜಿಲ್ಲಾಧಿಕಾರಿ ಶಿಖಾ ಅವರು ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಮರಿಗೌಡನನ್ನು ಜೈಲುಪಾಲು ಮಾಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ