Select Your Language

Notifications

webdunia
webdunia
webdunia
webdunia

ಮಣಿಪುರ ಮುಖ್ಯಮಂತ್ರಿ ಸ್ಥಾನಕ್ಕೆ ಎನ್‌ ಬಿರೇನ್ ಸಿಂಗ್ ರಾಜೀನಾಮೆ

ಮಣಿಪುರ ಮುಖ್ಯಮಂತ್ರಿ ಸ್ಥಾನಕ್ಕೆ ಎನ್‌ ಬಿರೇನ್ ಸಿಂಗ್ ರಾಜೀನಾಮೆ

Sampriya

ನವದೆಹಲಿ , ಭಾನುವಾರ, 9 ಫೆಬ್ರವರಿ 2025 (19:52 IST)
Photo Courtesy X
ನವದೆಹಲಿ: ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇಂಫಾಲ್‌ನ ರಾಜಭವನದಲ್ಲಿ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ನೇತೃತ್ವ ವಹಿಸಿದ್ದ ಸಿಂಗ್, ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ನಡುವೆ ಅಧಿಕಾರದಿಂದ ಕೆಳಗಿಳಿದರು. ತಿಂಗಳ ಅಶಾಂತಿ ಮತ್ತು ಪಕ್ಷದ ಆಂತರಿಕ ಚರ್ಚೆಗಳ ನಂತರ ಅವರ ರಾಜೀನಾಮೆ ನೀಡಿದ್ದಾರೆ.

ಇದಕ್ಕೂ ಮುನ್ನ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಿಂಗ್ ಭೇಟಿಯಾದರು. ನಂತರ, ಅವರು, ಬಿಜೆಪಿ ಸಂಸದ ಸಂಬಿತ್ ಪಾತ್ರ, ರಾಜ್ಯ ಸಚಿವರು ಮತ್ತು ಶಾಸಕರೊಂದಿಗೆ ಮಣಿಪುರ ರಾಜ್ಯಪಾಲರನ್ನು ಭೇಟಿ ಮಾಡಲು ತೆರಳಿದರು.

ಸಿಂಗ್ ತಮ್ಮ ರಾಜೀನಾಮೆ ಪತ್ರದಲ್ಲಿ ಕೇಂದ್ರ ಸರ್ಕಾರವು "ಸಕಾಲಿಕ ಕ್ರಮಗಳು, ಮಧ್ಯಸ್ಥಿಕೆಗಳು, ಅಭಿವೃದ್ಧಿ ಕಾರ್ಯಗಳು ಮತ್ತು ಪ್ರತಿಯೊಬ್ಬ ಮಣಿಪುರಿಯ ಹಿತಾಸಕ್ತಿಗಳನ್ನು ಕಾಪಾಡಲು ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ" ಕೃತಜ್ಞತೆಗಳನ್ನು ವ್ಯಕ್ತಪಡಿಸಿದ್ದಾರೆ. ಕೇಂದ್ರವು ತನ್ನ ಬೆಂಬಲವನ್ನು ಮುಂದುವರಿಸಲು ಒತ್ತಾಯಿಸಿದರು ಮತ್ತು ಪ್ರಮುಖ ಆದ್ಯತೆಗಳನ್ನು ಪಟ್ಟಿ ಮಾಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸೀಟ್‌ ಸಿಗದಿದ್ದಕ್ಕೆ ರೈಲಿನ ಎಂಜಿನ್ ಹತ್ತಿದ ಪ್ರಯಾಣಿಕರು: ವಿಡಿಯೋ ವೈರಲ್