Select Your Language

Notifications

webdunia
webdunia
webdunia
Saturday, 12 April 2025
webdunia

10 ನೇ ದಿನಕ್ಕೆ ಕಾಲಿಟ್ಟ ಎನ್,ಪಿ,ಎಸ್ ನೌಕರರ ಪ್ರತಿಭಟನೆ

N
bangalore , ಬುಧವಾರ, 28 ಡಿಸೆಂಬರ್ 2022 (20:08 IST)
ನೂತನ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರ ಸಂಘ ನಗರದ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆ ಹತ್ತನೆ ದಿನವೂ ಮುಂದುವರಿದಿದೆ. ನೌಕರರಿಗೆ ಸಂಧ್ಯಾಕಾಲದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಒದಗಿಸಲು ಎನ್‌ಪಿಎಸ್ ರದ್ದು ಪಡಿಸಿ, ಒಪಿಎಸ್ ಜಾರಿಗೊಳಿಸಬೇಕು. ಇದು “ಮಾಡು ಇಲ್ಲವೇ ಮಡಿ" ಹೋರಾಟವಾಗಿದ್ದು, ನಮ್ಮ ಬೇಡಿಕೆ ಈಡೇರುವವರೆಗೂ ಈ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೌಕರರು ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರ ತನ್ನ ಅಧಿಕೃತ ನಿಲುವು ಪ್ರಕಟಿಸದಿದ್ದರೆ ನಮ್ಮ ಹೋರಾಟ ಮುಂದಯವರೆಯುವುದು ಎಂದು ಸರ್ಕಾರದ ವಿರುದ್ದ ಕಿಡಿ ಕಾರುತ್ತಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಡ್ರಿಂಕ್ ಅಂಡ್ ಡ್ರೈವ್ ಮೂಲಕ ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ಹಣ ಸಂದಾಯ