Good News: ನಾಳೆಯಿಂದ ನಾಗಸಂದ್ರ ಮಾದಾವರ ಮೆಟ್ರೋ ಸೇವೆ ಆರಂಭ

Sampriya
ಬುಧವಾರ, 6 ನವೆಂಬರ್ 2024 (17:23 IST)
Photo Courtesy X
ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋದ ಗ್ರೀನ್ ಲೈನ್ ನ ನಾಗಸಂದ್ರದಿಂದ ಮಾದಾವರ ವರೆಗಿನ 3.14-ಕಿಮೀ. ವಿಸ್ತರಿತ ಮಾರ್ಗದಲ್ಲಿ ನಾಳೆಯಿಂದ ಮೆಟ್ರೋ ಸೇವೆ ಆರಂಭಗೊಳ್ಳಲಿದೆ.

ಈ ಬಗ್ಗೆ ಅಧಿಕಾರಿಗಳು ಇಂದು ತಿಳಿಸಿದರು. ಇಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮೆಟ್ರೋ ಮಾರ್ಗವನ್ನು ಪರಿಶೀಲಿಸಿದರು ಮತ್ತು ಯಶವಂತಪುರ ಮೆಟ್ರೋ ನಿಲ್ದಾಣದಿಂದ ಮಾದಾವರದವರೆಗೆ ಪ್ರಯಾಣಿಸುವ ಮೂಲಕ ನಾಗಸಂದ್ರ - ಮಾದಾವರದವರೆಗಿನ ವಿಸ್ತರಿತ ಮಾರ್ಗಕ್ಕೆ ಪ್ರಾಯೋಗಿಕ ಚಾಲನೆ ನೀಡಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಪರಿಶೀಲನೆ ನಡೆಸಿದರು. ಸದ್ಯ ನಾಗಸಂದ್ರ ನಿಲ್ದಾಣದವರೆಗೂ ಹಸಿರು ಮಾರ್ಗ ಇದ್ದು, ನಾಗಸಂದ್ರದಿಂದ‌ ಮಾದಾವರವರೆಗೂ ಮೆಟ್ರೋ ಮಾರ್ಗ ವಿಸ್ತರಣೆ ಮಾಡಲಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ನಾಗಸಂದ್ರದಿಂದ ಮಾದಾವರ ಮೆಟ್ರೋ ನಿಲ್ದಾಣದವರೆಗಿನ ವಿಸ್ತರಿತ 3.14 ಕಿಮೀ ಮಾರ್ಗವನ್ನು ಇಂದು ಪರಿಶೀಲನೆ ನಡೆಸಿದೆ. ನಾಗರಿಕರನ್ನು ಹೆಚ್ಚು ಕಾಯಿಸುವುದು ಸರಿಯಲ್ಲ ಎನ್ನುವ ಕಾರಣಕ್ಕೆ ಈಗಲೇ ಹೊಸ ಮಾರ್ಗದ ಸೇವೆಯನ್ನು ಆರಂಭಿಸಲಾಗಿದ್ದು, ಸದ್ಯದಲ್ಲೇ ಅಧಿಕೃತವಾಗಿ ಉದ್ಘಾಟಿಸಲಾಗುವುದು. ಇಡೀ ದೇಶದಲ್ಲೇ ಅತಿ ಹೆಚ್ಚು ಮೆಟ್ರೋ ಪ್ರಯಾಣಿಕರನ್ನು ಬೆಂಗಳೂರು ಹೊಂದಿದೆ. ವಿಸ್ತರಿತ 3.14 ಕಿ.ಮೀ ಸೇರಿ ಬೆಂಗಳೂರು ಮೆಟ್ರೋ 76.95 ಕಿಮೀ ವ್ಯಾಪ್ತಿಯನ್ನು ಹೊಂದಿದೆ. ಮೆಟ್ರೋ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲು ಆದ್ಯತೆ ನೀಡಲಾಗುತ್ತಿದ್ದು, ಮುಂದಿನ ವರ್ಷಕ್ಕೆ ಇನ್ನೂ 30 ಕಿ.ಮೀ ಸೇರ್ಪಡೆಯಾಗಲಿದೆ. 2026ಕ್ಕೆ ಬೆಂಗಳೂರು ಮೆಟ್ರೋದ ಒಟ್ಟು ವ್ಯಾಪ್ತಿ 175 ಕಿ.ಮೀ ಆಗಲಿದೆ ಎಂದು ತಿಳಿಸಿದೆ. ಈ ವೇಳೆ ಸಂಸದರಾದ ತೇಜಸ್ವಿ ಸೂರ್ಯ, ನೆಲಮಂಗಲ ಶಾಸಕರಾದ ಶ್ರೀ ಎಂ. ಶ್ರೀನಿವಾಸ್‌, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಮಹೇಶ್ವರ ರಾವ್‌ ಮೊದಲಾದವರು ಉಪಸ್ಥಿತರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments