Select Your Language

Notifications

webdunia
webdunia
webdunia
webdunia

ಮತ್ತೆ ಮೈತ್ರಿ ಸರ್ಕಾರದ ಬೆಂಬಲಕ್ಕೆ ನಿಂತ ಪಕ್ಷೇತರ ಶಾಸಕ ನಾಗೇಶ್‌

ಮತ್ತೆ ಮೈತ್ರಿ ಸರ್ಕಾರದ ಬೆಂಬಲಕ್ಕೆ ನಿಂತ ಪಕ್ಷೇತರ ಶಾಸಕ ನಾಗೇಶ್‌
ಬೆಂಗಳೂರು , ಗುರುವಾರ, 14 ಫೆಬ್ರವರಿ 2019 (09:32 IST)
ಬೆಂಗಳೂರು : ಜೆಡಿಎಸ್‌ ಮತ್ತು ಕಾಂಗ್ರೆಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್‌ ಪಡೆದಿದ್ದ ಮುಳಬಾಗಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್‌ ಅವರು ಇದೀಗ ಮತ್ತೆ ಮೈತ್ರಿ ಸರ್ಕಾರದ ಬೆಂಬಲಕ್ಕೆ ನಿಂತಿದ್ದಾರೆ.

ಮೈತ್ರಿ ಸರ್ಕಾರದ ಕಾರ್ಯವೈಖರಿ ತೃಪ್ತಿ ನೀಡಿಲ್ಲ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಸಿಕ್ಕಿಲ್ಲ ಎಂದು ಅಸಮಾಧಾನಗೊಂಡ ಮುಳಬಾಗಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್‌ ಹಾಗೂ ರಾಣೇಬೆನ್ನೂರು ಪಕ್ಷೇತರ ಶಾಸಕ ಆರ್. ಶಂಕರ್ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಂಡಿದ್ದರು. 

 

ಆದರೆ ಇದೀಗ ಮುಳಬಾಗಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್‌ ಮತ್ತೆ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಬೆಂಬಲ ಪತ್ರವನ್ನು ನೀಡಿದ್ದಾರೆ. 

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

                                                                                                      

 


Share this Story:

Follow Webdunia kannada

ಮುಂದಿನ ಸುದ್ದಿ

ಪರಾರಿಗೆ ಯತ್ನಿಸಿ ಸಿಕ್ಕಿಬಿದ್ದ ಭೂಪ!