Publish Date: Thu, 13 Jun 2019 (18:25 IST)
Updated Date: Thu, 13 Jun 2019 (18:27 IST)
ದಲಿತ ಯುವಕನ ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆಗಳು ಮುಂದುವರಿದಿವೆ.
ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದಲ್ಲಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಪ್ರತಾಪ್ ಎಂಬ ದಲಿತ ಯುವಕನನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ಮಾಡಲಾಯಿತು.
ಗುಂಡ್ಲುಪೇಟೆಯಲ್ಲಿ ನಡೆದಿದ್ದ ಪೈಶಾಚಿಕ ಕೃತ್ಯಕ್ಕೆ ಆನೇಕಲ್ ಪಟ್ಟಣದ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ದಲಿತ ಪರ ಸಂಘಟನೆಗಳು ಕಾರ್ಯಕರ್ತರು ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ರು.
ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಿ ಆರೋಪಿಗಳನ್ನು ಬಂದಿಸುವಂತೆ ಆಗ್ರಹ ಮಾಡಿದ್ರು. ಆರೋಪಿಗಳನ್ನು ಬಂಧಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿದ್ರು.
ಚಾಮರಾಜನಗರ ಲೋಕಸಭಾ ಸದಸ್ಯ ಶ್ರೀನಿವಾಸ್ ಪ್ರಸಾದ್ ಹಾಗೂ ದಲಿತ ಶಾಸಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ನ್ಯಾಯ ಬೇಕೆಂದು ಕೂಗಿದರು.