ಬೆಂಗಳೂರು : ಬೆಂಗಳೂರು ಸಿಟಿಯಲ್ಲಿ ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬ ಬೆತ್ತಲೆಯಾಗಿ ನಿಂತು ಅಸಭ್ಯ ವರ್ತನೆ ತೋರಿಸಿದ್ದು, ಆತನನ್ನು ಇದೀಗ ಆರ್.ಟಿ ನಗರ ಪೊಲೀಸರು ಬಂಧಿಸಿದ್ದಾರೆ.
ಆತನ ಹೆಸರು ಮಹಮ್ಮದ್ ಸಿದ್ದಿಕ್ ಎಂಬುದಾಗಿ ಗುರುತಿಸಲಾಗಿದ್ದು, ಆತ ಸಂಜೆ ವೇಳೆಯಲ್ಲಿ ನಡುರಸ್ತೆಯಲ್ಲಿ ಬೆತ್ತಲೆ ನಿಂತು ಅಸಹ್ಯವಾಗಿ ವರ್ತಿಸುತ್ತಿದ್ದ. ಆತನನ್ನು ನೋಡಿ ಮಹಿಳೆಯರು ಬೆಚ್ಚಿಬಿದ್ದಿದ್ದಾರೆ.
ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾರ್ವಜನಿಕರು ಆತನನ್ನು ರೆಡ್ ಹ್ಯಾಂಡಾಗಿ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಕಾಮುಕನನ್ನು ಹೊಯ್ಸಳ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.