Select Your Language

Notifications

webdunia
webdunia
webdunia
Wednesday, 9 April 2025
webdunia

‘ವಿದ್ವತ್ ಕಡೆಯವರು ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ’

ಮೊಹಮ್ಮದ್ ನಲಪಾಡ್
ಬೆಂಗಳೂರು , ಶುಕ್ರವಾರ, 2 ಮಾರ್ಚ್ 2018 (17:13 IST)
ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂದಿಸಿದಂತೆ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ಗೆ ಜಾಮೀನು ಅರ್ಜಿ ವಜಾಗೊಳಿಸಿರುವ ಹಿನ್ನಲೆಯಲ್ಲಿ ಇತರ ಆರೋಪಿಗಳ ಪರ ವಕೀಲರು ಪ್ರತಿಕ್ರಿಯಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಯ ಆಸ್ಪತ್ರೆಯಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ವಿದ್ವತ್ ಕಡೆಯವರು ಪ್ರಕರಣದ ಹಾದಿ ತಪ್ಪಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನೂ ತಿರುಚಿರಬಹುದು ಎಂದು ಇತರ ಆರೋಪಿಗಳ ಪರ ವಕೀಲ ಬಾಲನ್ ಆರೋಪಿಸಿದ್ದಾರೆ.

ಹೀಗಾಗಿ ಹೈ ಕೋರ್ಟ್ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸುತ್ತೇವೆ. ಒಂದು ವೇಳೆ ಅಲ್ಲೂ ನಮ್ಮ ಪರವಾಗಿ ತೀರ್ಪು ಬರದೇ ಇದ್ದರೆ ಸುಪ್ರೀಂ ಕೋರ್ಟ್ ವರೆಗೂ ಹೋಗಲು ನಾವು ಸಿದ್ಧರಿದ್ದೇವೆ ಎಂದು ವಕೀಲ ಬಾಲನ್ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಜಾಮೀನು ತೀರ್ಪು ಹೊರಬೀಳುತ್ತಿದ್ದಂತೆ ಜೈಲಲ್ಲೂ ನಲಪಾಡ್ ರಂಪಾಟ