ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರದ್ದು ಎನ್ನಲಾದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಇದೊಂದು ನಕಲಿ ಎಂದು ಮಂಗಳೂರು ನಗರದ ಪೊಲೀಸ್ ಕಮಿಷನರ್ ಗೆ ದೂರು ನೀಡಿ ತನಿಖೆಗೆ ಒತ್ತಾಯಿಸಿದ್ದಾರೆ.
ಇದೊಂದು ನಕಲಿ ಆಡಿಯೋ ಎಂದು ಆರೋಪಿಸಿ ತನಿಖೆ ನಡೆಸುವಂತೆ ಬಿಜೆಪಿ ಶಾಸಕರಾದ ವೇದವ್ಯಾಸ ಕಾಮತ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ತಂಡ ಮನವಿ ಸಲ್ಲಿಸಿತು. ವೈರಲ್ ಆದ ಆಡಿಯೋ ನಕಲಿ ಎಂದು ಆರೋಪಿಸಿ ಸೂಕ್ತ ತನಿಖೆಗೆ ಒತ್ತಾಯಿಸಿದ ನಿಯೋಗ
ವೈರಲ್ ಮಾಡಿದವರು ಮತ್ತು ನಕಲಿ ಆಡಿಯೋ ಸೃಷ್ಟಿಸಿದವರ ಬಂಧನಕ್ಕೆ ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ರಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ.