Publish Date: Tue, 24 Oct 2017 (12:30 IST)
Updated Date: Tue, 24 Oct 2017 (12:32 IST)
ಮಂಗಳೂರು: ಸಿಎಂ ಸಿದ್ದರಾಮಯ್ಯ ಮೀನೂಟ ಮಾಡಿ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದು, ಈಗ ವಿವಾದಕ್ಕೆ ಕಾರಣವಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸಂಸದ ನಳಿನ್ ಕುಮಾರ್ ಕಟೀಲ್, ಗೋಮಾಂಸ ತಿನ್ನುತ್ತೇನೆ ಎನ್ನುವ ಮುಖ್ಯಮಂತ್ರಿಯಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಅವರು ದೇವಸ್ಥಾನ, ದೇವರ ಬಗೆಗಿರುವ ನಂಬಿಕೆ, ಭಾವನೆಗಳಿಗೆ ಬೆಲೆ ಕೊಡಲಿಲ್ಲ ಎಂದಿದ್ದಾರೆ.
ಭಾನುವಾರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯ ಧರ್ಮಸ್ಥಳ ಮಂಜುನಾಥ ದೇವರ ದರ್ಶನ ಮಾಡಿದ್ದರು. ಈ ವಿಚಾರ ರಾಜ್ಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು.