ನಳಿನ್​​​​​​​, ಡಿವಿಎಸ್​ ಫೋಟೋಗೆ ಚಪ್ಪಲಿ ಹಾರ

Webdunia
ಸೋಮವಾರ, 15 ಮೇ 2023 (19:39 IST)
ಪುತ್ತೂರು ಮತ್ತು ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿರುವುದಕ್ಕೆ ಈ ಭಾಗದ ಹಿಂದೂ ಕಾರ್ಯಕರ್ತರು ಕೆರಳಿದ್ದಾರೆ. ಬಿಜೆಪಿ ಹೀನಾಯ ಸೋಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​ ಕುಮಾರ್ ಕಟೀಲ್​​​ ಹಾಗೂ ಡಿ.ವಿ ಸದಾನಂದ ಗೌಡ ಕಾರಣವೆಂದು ದೂರಲಾಗಿದೆ.. ಇವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಸ್ ನಿಲ್ದಾಣದ ‌ಬಳಿ ಬ್ಯಾನರ್​​ ಹಾಕಿ ಆಕ್ರೋಶ ಹೊರಹಾಕಿದ್ದಾರೆ. ನಳಿನ್ ಕುಮಾರ್​ ಕಟೀಲ್ ಮತ್ತು ಡಿ.ವಿ ಸದಾನಂದ ಗೌಡ ಬ್ಯಾನರ್ ಹಾಕಿ ಶ್ರದ್ಧಾಂಜಲಿ ಎಂದು ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಹೀನಾಯವಾಗಿ ಸೋಲಲು ಕಾರಣರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ ಅಂತ ಬ್ಯಾನರ್ ಹಾಕಲಾಗಿದೆ. ನೊಂದ ಹಿಂದೂ ಕಾರ್ಯಕರ್ತರ ಹೆಸರಿನಲ್ಲಿ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಹಿಂದೂ ಮುಖಂಡ ಅರುಣ್ ಪುತ್ತಿಲ ಬಿಜೆಪಿ ವಿರುದ್ಧ ಬಂಡಾಯವೆದ್ದಿದ್ದು ಪಕ್ಷೇತರವಾಗಿ ಸ್ಪರ್ಧಿಸಿದ್ರು.. ಕಾಂಗ್ರೆಸ್ ವಿರುದ್ಧ ಸೆಣಸಾಡಿ 3 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಪುತ್ತೂರಿನಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ಜಾರಿದೆ. ಪುತ್ತೂರು ತಾಲೂಕಿನವರೇ ಆದ ನಳಿನ್ ಕುಮಾರ್​​ ಕಟೀಲ್ ಹಾಗೂ ಡಿ.ವಿ ಸದಾನಂದಗೌಡರು ಬಿಜೆಪಿ ಸೋಲಿಗೆ ಕಾರಣ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments