Publish Date: Thu, 19 Apr 2018 (18:58 IST)
Updated Date: Thu, 19 Apr 2018 (19:02 IST)
ಕೃಷ್ಣರಾಜಪುರ : ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿ ನಲ್ಲೂರಹಳ್ಳಿ ನಾಗೇಶ್ ಎಂಬುವವರು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಮೇಲೆ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.
ವೈಟ್‌ಫೀಲ್ಡ್‌ನಲ್ಲಿ ಹಮ್ಮಿಕೊಂಡಿದ್ದ ದಲಿತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು,’ ಮಹದೇವಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಣಕ್ಕಾಗಿ ಮಾರಾಟ ಮಾಡಿಕೊಂಡಿದ್ದಾರೆ. 2013ರ ಚುನಾವಣೆಯಲ್ಲಿಯೂ ಪರಿಶಿಷ್ಟ ಜಾತಿಯವರಿಗೆ ಟಿಕೆಟ್ ನೀಡದೆ ಅವಮಾನ ಮಾಡಿತ್ತು. ಮತ್ತೊಮ್ಮೆ ದಲಿತ ವಿರೋಧಿ ನಡೆ ಮರುಕಳಿಸಿದೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಣಕ್ಕಾಗಿ ಟಿಕೆಟ್ ಮಾರಿಕೊಂಡು ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ