Select Your Language

Notifications

webdunia
webdunia
webdunia
webdunia

ಮೊದಲ ಬಾರಿಗೆ ಮಾರುಕಟ್ಟೆಗೆ ಬಂದ 'ನಂದಿನಿ ಬ್ರ್ಯಾಂಡ್'ನ ದೋಸೆ, ಇಡ್ಲಿ ಹಿಟ್ಟು

Karnataka Milk Federation New Product, Dose Idli Batter, Chief Minister Siddaramaiah

Sampriya

ಬೆಂಗಳೂರು , ಬುಧವಾರ, 25 ಡಿಸೆಂಬರ್ 2024 (17:55 IST)
Photo Courtesy X
ಬೆಂಗಳೂರು: ಇದೇ ಮೊದಲ ಬಾರಿಗೆ ಮಾರುಕಟ್ಟೆಗೆ ಕರ್ನಾಟಕ ಹಾಲು ಮಹಾಮಂಡಳ(ಕೆಎಂಎಫ್)ನ 'ನಂದಿನಿ ಬ್ರ್ಯಾಂಡ್'ನ ಪ್ರೋಟೀನ್‌ಯುಕ್ತ ದೋಸೆ ಹಿಟ್ಟು ಮತ್ತು ಇಡ್ಲಿ ಹಿಟ್ಟನ್ನು ಬಿಡುಗಡೆ ಮಾಡಿದೆ.

ವಿಧಾನಸೌಧದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿನಿ ಬ್ರ್ಯಾಂಡ್‌ನ 'ರೆಡಿ ಟು ಕುಕ್' ನಂದಿನಿ ವೇ ಪ್ರೋಟೀನ್‌ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಸಚಿವರಾದ ವೆಂಕಟೇಶ್ವರ, ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್, ಕೆ.ಎಂ.ಎಫ್. ಅಧ್ಯಕ್ಷ ಭೀಮಾನಾಯ್ಕ್, ವ್ಯವಸ್ಥಾಪಕ ನಿರ್ದೇಶಕ ಕೆ.ಶಿವಸ್ವಾಮಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಪ್ರೊಡಕ್ಟ್‌ನ ವಿಶೇಷವೇನು: ಕೆಎಂಎಫ್ ಬಿಡುಗಡೆ ಮಾಡಿರುವ ದೋಸೆ ಹಾಗೂ ಇಡ್ಲಿ ಹಿಟ್ಟಿನಲ್ಲಿ ಶೇ 5 ರಷ್ಟು ಪ್ರೋಟೀನ್‌ ಅಂಶವನ್ನು ಮಿಶ್ರ ಮಾಡಲಾಗಿದೆ.

ಬೆಂಗಳೂರು ನಗರದಲ್ಲಿ ಪ್ರಾಯೋಗಿಕವಾಗಿ ದೋಸೆ ಹಾಗೂ ಇಡ್ಲಿ ಹಿಟ್ಟನ್ನು ಎರಡು ವಿಧದ ಪ್ಯಾಕೆಟ್ ಗಳಲ್ಲಿ ಮಾರಾಟ ಮಾಡಲಾಗುತ್ತಿದೆ. 450 ಗ್ರಾಂ. ತೂಕದ ಪ್ಯಾಕೆಟ್‌ಗೆ ₹40 ಹಾಗೂ 900 ಗ್ರಾಂ. ತೂಕದ ಪ್ಯಾಕೆಟ್‌ಗೆ ₹80 ಗರಿಷ್ಠ ಮಾರಾಟ ದರ ನಿಗದಿಪಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಾಂತಾ ವೇಷ ಹಾಕಿದ್ದ ಡೆಲಿವರಿ ಬಾಯ್ ಗೆ ಬಲಪಂಥೀಯ ಕಾರ್ಯಕರ್ತರು ಮಾಡಿದ್ದೇನು