ನಂದೀಶ್​ರದ್ದು ಸಾವಲ್ಲ ಕೊಲೆ..!

Webdunia
ಶನಿವಾರ, 29 ಅಕ್ಟೋಬರ್ 2022 (17:33 IST)
ಅಮಾನತುಗೊಂಡಿದ್ದ ಪೊಲೀಸ್ ಇನ್ಸ್ಪೆಕ್ಟರ್ ನಂದೀಶ್ ಸಾವು, ಹೃದಯಾಘಾತದಿಂದ ಅಲ್ಲ ಬದಲಾಗಿ ಇದೊಂದು ಕೊಲೆ ಎಂದು ಮಾಜಿ‌ ಸಿಎಂ ಎಚ್.ಡಿ ಕುಮಾರಸ್ವಾಮಿ‌ ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಈಗ ಸರ್ಕಾರವೇ ಸತ್ಯ ಹೇಳಿದೆ! ಸದ್ಯ, ಸಾವಿನಲ್ಲೂ ಸತ್ಯ ಹೇಳುವ ಧೈರ್ಯವನ್ನು ಸರ್ಕಾರ ಮಾಡಿದೆ. ಬೊಮ್ಮಾಯಿ ಸಂಪುಟದ ಸಚಿವರೇ ವಿಷಯ ಬಹಿರಂಗಪಡಿಸಿದ್ದಾರೆ. ಸಚಿವ ಎಂ.ಟಿ.ಬಿ. ನಾಗರಾಜ್ ಅವರ ಹೇಳಿಕೆಯು ಈ ಸರ್ಕಾರದ ಕಾಸಿಗಾಗಿ ಪೋಸ್ಟಿಂಗ್ ದಂಧೆಗೆ ಹಿಡಿದ ಕನ್ನಡಿ ಎಂದು ಪ್ರತಿಕ್ರಿಯಿಸಿದ್ದಾರೆ. ಸಚಿವರೇ ಹೇಳಿದಂತೆ 70-80 ಲಕ್ಷಗಳನ್ನು ನಂದೀಶ್ ಅವರು ಯಾರಿಗೆ ಕೊಟ್ಟರು? ಇದರಲ್ಲಿ ಅವರ ಮೇಲಿನ ಉನ್ನತ ಅಧಿಕಾರಿಗಳು, ಗೃಹ ಸಚಿವರು ಮತ್ತು ಮುಖ್ಯಮಂತ್ರಿಗೆ ಪರ್ಸಂಟೇಜ್ ಹೋಗಿದೆಯಾ? ಅಥವಾ ಕಾಣದ ರಿಮೋಟ್ ಯಾವುದಾದರೂ ಇದೆಯಾ? ಸಚಿವರಂತೆ ನೀವೂ ಸತ್ಯ ಹೇಳಿ ಸಿ.ಎಂ. ಸಾಹೇಬರೇ ಎಂದು ಟ್ವೀಟ್‌ ಮಾಡಿದ್ದಾರೆ. ಸಂಘ ಸಂಸ್ಕಾರದ ಗೃಹ ಸಚಿವರು ಉತ್ತರ ನೀಡಲೇಬೇಕು. ಧಮ್ಮಿದ್ರೆ, ತಾಕತ್ತಿದ್ರೆ ಎನ್ನುವ ಮುಖ್ಯಮಂತ್ರಿ ಅವರು ಈ ಬಗ್ಗೆ ಮೌನ ಮುರಿಯುವ ತಾಕತ್ತು ತೋರಬೇಕು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments