Select Your Language

Notifications

webdunia
webdunia
webdunia
webdunia

ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ ದಿನಾಂಕ ಘೋಷಣೆ

ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ ದಿನಾಂಕ ಘೋಷಣೆ
ಬೆಂಗಳೂರು , ಗುರುವಾರ, 9 ಮಾರ್ಚ್ 2017 (13:25 IST)
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ರಾಜೀನಾಮೆಯಿಂದ ತೆರವಾದ ನಂಜನಗೂಡು ಮತ್ತು ಮಹದೇವ್ ಪ್ರಸಾದ್ ನಿಧನದ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಉಪಚುನಾವಣೆ ದಿನಾಂಕವನ್ನು ಚುನಾವಣೆ ಆಯೋಗ ಘೋಷಿಸಿದೆ.
 
ಉಭಯ ಕ್ಷೇತ್ರಗಳಲ್ಲಿ ಮಾರ್ಚ್ 14ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು ಮಾರ್ಚ್ 21ರ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಮಾರ್ಚ್ 22 ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಮಾರ್ಚ್ 24 ನಾಮಪತ್ರ ಹಿಂಪಡೆಯುವ ಕೊನೆಯ ದಿನಾಂಕ ಆಗಿದೆ.
 
ಉಭಯ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಏಪ್ರಿಲ್ 13 ರಂದು ಪ್ರಕಟವಾಗಲಿದೆ.
 
ನಂಜನಗೂಡು ಕ್ಷೇತ್ರದ ವಿಧಾನಸಭೆ ಚುನಾವಣೆ ಶ್ರೀನಿವಾಸ್ ಪ್ರಸಾದ್ ಮತ್ತು ಸಿಎಂ ಸಿದ್ದರಾಮಯ್ಯನವರಿಗೆ ಪ್ರತಿಷ್ಠೆಯ ಸಂಗತಿಯಾಗಿದೆ. ಅನಗತ್ಯವಾಗಿ ಸಚಿವ ಸ್ಥಾನದಿಂದ ಕೈಬಿಡಲಾಗಿತ್ತು ಎಂದು ಆರೋಪಿಸಿ ಶ್ರೀನಿವಾಸ್ ಪ್ರಸಾದ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ಜನತೆಯ ಚಿತ್ತ ಜೆಡಿಎಸ್ ಪಕ್ಷದತ್ತ: ದೇವೇಗೌಡ