Select Your Language

Notifications

webdunia
webdunia
webdunia
webdunia

ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ
bengaluru , ಸೋಮವಾರ, 23 ಆಗಸ್ಟ್ 2021 (16:31 IST)
ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಸೋಮವಾರ ಮಂಗಳೂರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸರಳವಾಗಿ ಹಾಗೂ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು.
ಸಂಸದ ನಳೀನ್ ಕುಮಾರ್ ಕಟೀಲ್ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೇರವೇರಿಸಿ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶೋಷಿತರು ಮತ್ತು ಹಿಂದುಳಿದವರ ಶ್ರೇಯೋಭಿವೃದ್ಧಿಗೆ ನಾರಾಯಣ ಗುರುಗಳ ಹೋರಾಟ ಅವಿರಸ್ಮರಣೀಯವಾದದ್ದು. ಸಾಮಾಜಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಪರಿವರ್ತನೆಯ ಹರಿಕಾರರಾಗಿ ಅವರು ಸಮಾಜದ ಒಳಿತಿಗಾಗಿ ದುಡಿದಿದ್ದಾರೆ. ಅವರ ಆಚಾರ ವಿಚಾರ ಹಾಗೂ ಆದರ್ಶಗಳನ್ನು ಪಾಲಿಸುವಂತೆ ಕರೆ ನೀಡಿದರು.
ಒಂದೇ ಜಾತಿ, ಒಂದೇ ಧರ್ಮ ಹಾಗೂ ಒಂದೇ ದೇವರು ಎಂಬ ತತ್ವವನ್ನು ನೀಡಿದ ಅವರ ಸಂದೇಶಗಳು ಸಮಾಜಕ್ಕೆ ತಲುಪುವ ಕೆಲಸವಾಗಬೇಕು ಎಂದರು.‌
ಶಾಸಕ ವೇದವ್ಯಾಸ್ ಕಾಮತ್, ಮೂಡ ಅಧ್ಯಕ್ಷ ಹಾಗೂ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಟ್ರಸ್ಟಿ ರವಿಶಂಕರ್ ಮಿಜಾರು, ಮಂಗಳೂರು ಮಹಾನಗರಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ದಿ. ಮೈಸೂರು ಎಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು, ಬಿಲ್ಲವ ಸಂಘ ಹಾಗೂ ಯುವ ವಾಹಿನಿಯ ಪದಾಧಿಕಾರಿಗಳು, ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿ, ವಂದಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಫುಡ್ ಫ್ಯಾಕ್ಟರಿಯ ಬಾಯ್ಲರ್ ಸ್ಫೋಟಗೊಂಡು ಇಬ್ಬರು ಸಜೀವದಹನ