ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Webdunia
ಸೋಮವಾರ, 23 ಆಗಸ್ಟ್ 2021 (16:31 IST)
ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಸೋಮವಾರ ಮಂಗಳೂರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸರಳವಾಗಿ ಹಾಗೂ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು.
ಸಂಸದ ನಳೀನ್ ಕುಮಾರ್ ಕಟೀಲ್ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೇರವೇರಿಸಿ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶೋಷಿತರು ಮತ್ತು ಹಿಂದುಳಿದವರ ಶ್ರೇಯೋಭಿವೃದ್ಧಿಗೆ ನಾರಾಯಣ ಗುರುಗಳ ಹೋರಾಟ ಅವಿರಸ್ಮರಣೀಯವಾದದ್ದು. ಸಾಮಾಜಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಪರಿವರ್ತನೆಯ ಹರಿಕಾರರಾಗಿ ಅವರು ಸಮಾಜದ ಒಳಿತಿಗಾಗಿ ದುಡಿದಿದ್ದಾರೆ. ಅವರ ಆಚಾರ ವಿಚಾರ ಹಾಗೂ ಆದರ್ಶಗಳನ್ನು ಪಾಲಿಸುವಂತೆ ಕರೆ ನೀಡಿದರು.
ಒಂದೇ ಜಾತಿ, ಒಂದೇ ಧರ್ಮ ಹಾಗೂ ಒಂದೇ ದೇವರು ಎಂಬ ತತ್ವವನ್ನು ನೀಡಿದ ಅವರ ಸಂದೇಶಗಳು ಸಮಾಜಕ್ಕೆ ತಲುಪುವ ಕೆಲಸವಾಗಬೇಕು ಎಂದರು.‌
ಶಾಸಕ ವೇದವ್ಯಾಸ್ ಕಾಮತ್, ಮೂಡ ಅಧ್ಯಕ್ಷ ಹಾಗೂ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಟ್ರಸ್ಟಿ ರವಿಶಂಕರ್ ಮಿಜಾರು, ಮಂಗಳೂರು ಮಹಾನಗರಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ದಿ. ಮೈಸೂರು ಎಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು, ಬಿಲ್ಲವ ಸಂಘ ಹಾಗೂ ಯುವ ವಾಹಿನಿಯ ಪದಾಧಿಕಾರಿಗಳು, ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿ, ವಂದಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments