ನರೇಂದ್ರ ಮೋದಿ ಮತ್ತು ದೇವೇಗೌಡರದು ಜನ್ಮಜನ್ಮದ ಅನುಬಂಧ: ವಿಜಯೇಂದ್ರ ಬಣ್ಣನೆ

Sampriya
ಶನಿವಾರ, 6 ಸೆಪ್ಟಂಬರ್ 2025 (20:16 IST)
Photo Credit X
ಬೆಂಗಳೂರು: ಇಳಿವಯಸ್ಸಿನಲ್ಲೂ ದೇವೇಗೌಡ ಅವರು ದೇಶದ ಬಗ್ಗೆ ಇಟ್ಟಿರುವ ಕಾಳಜಿ, ನರೇಂದ್ರ ಮೋದಿ ಅವರ ನಾಯಕತ್ವದ ಬಗ್ಗೆ ಅವರು ಇಟ್ಟಿರುವ ವಿಶ್ವಾಸ- ಇವೆಲ್ಲವೂ ಯುವರಾಜಕಾರಣಿಗಳು, ನಮ್ಮಂಥವರಿಗೆ ಮಾದರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ದೇವೇಗೌಡ ವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲು ಮತ್ತು ಅವರಿಗೆ ಅಭಿನಂದನೆ ಸಲ್ಲಿಸಲು ಬಯಸಿದ್ದೆ. ಅವರ ಮಾರ್ಗದರ್ಶನ ಪಡೆಯಲು ನಾನು ಮತ್ತು ಪಕ್ಷದ ಹಿರಿಯ ಶಾಸಕರು ಬಂದು ಅವರನ್ನು ಭೇಟಿ ಮಾಡಿದ್ದೇವೆ ಎಂದು ತಿಳಿಸಿದರು. 

ಭಾರತವನ್ನು ಸದೃಢವಾಗಿ ಮುನ್ನಡೆಸಲು ನರೇಂದ್ರ ಮೋದಿಯವರಿಂದ ಮಾತ್ರ ಸಾಧ್ಯ ಎಂದು ಅವರು ತಿಳಿಸಿದ್ದಾರೆ. ಇನ್ಯಾರಿಂದಲೂ ಇದು ಸಾಧ್ಯವಿಲ್ಲ. ಮೋದಿ ಅವರು ಸವಾಲನ್ನು ಸ್ವೀಕರಿಸಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ಅವರೇ ಇಂಥ ಬಲಿಷ್ಠ ಭಾರತ ಮುನ್ನಡೆಸಲು ಸಾಧ್ಯ ಎಂಬ ಮಾತನ್ನೂ ಅವರು ಉಲ್ಲೇಖಿಸಿದರು ಎಂದು ತಿಳಿಸಿದರು.

ನರೇಂದ್ರ ಮೋದಿ ಅವರ ಮತ್ತು ದೇವೇಗೌಡ ಅವರದು ಜನ್ಮಜನ್ಮದ ಅನುಬಂಧ ಎಂಬ ಮಾತನ್ನೂ ಉಲ್ಲೇಖಿಸಿದ್ದಾರೆ. ಟ್ರಂಪ್ ಸವಾಲು ಒಡ್ಡಿದಾಗ 48 ಗಂಟೆಗಳಲ್ಲಿ ಯಾವ ರೀತಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದರು ಎಂಬ ಕುರಿತು ಕೂಡ ದೇವೇಗೌಡರು ಹೇಳಿದ್ದಾರೆ. ಅವರೊಬ್ಬ ಮಾದರಿ ರಾಜಕಾರಣಿ ಎಂದು ಮೆಚ್ಚುಗೆ ಸೂಚಿಸಿದರು.

ಒಬ್ಬ ಹಿರಿಯ ಹಾಗೂ ಮುತ್ಸದ್ಧಿ ರಾಜಕಾರಣಿ, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ದೇನೆ. ಈಚೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರು, ಶಾಂಘೈ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ತದನಂತರ ದೇವೇಗೌಡರು ಪ್ರಧಾನಿಯವರಿಗೆ ಒಂದು ಪತ್ರ ಬರೆದು ಅವರಿಗೆ ಅಭಿನಂದನೆ ಸಲ್ಲಿಸಿದ್ದರು ಎಂದು ವಿವರಿಸಿದರು.

ಜೆಡಿಎಸ್- ನಮ್ಮ ನಡುವೆ ಸಮನ್ವಯದ ಕೊರತೆ ಇಲ್ಲ ಎಂದು ಪ್ರಶ್ನೆಗೆ ಅವರು ಉತ್ತರ ಕೊಟ್ಟರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದು, ರೈತರನ್ನು ಮರೆತಿದೆ. ಭೀಕರ ಮಳೆಯಿಂದ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ ಎಂದರು.

ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ.ಸಿ.ಎನ್. ಅಶ್ವಥನಾರಾಯಣ್, ಶಾಸಕರಾದ ಸುರೇಶ್ ಗೌಡ, ಸಿ.ಕೆ.ರಾಮಮೂರ್ತಿ, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಪ್ರಕೋಷ್ಠಗಳ ರಾಜ್ಯ ಸಂಯೋಜಕ ದತ್ತಾತ್ರಿ, ಜೆಡಿಎಸ್ ಮುಖಂಡರಾದ ಜವರಾಯೇಗೌಡ ಹಾಗೂ ರಮೇಶ್ ಪ್ರಮುಖರು ಉಪಸ್ಥಿತರಿದ್ದರು<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಮುಂದಿನ ಸುದ್ದಿ
Show comments