Select Your Language

Notifications

webdunia
webdunia
webdunia
webdunia

ನರೇಂದ್ರ ಮೋದಿ : ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ

ನರೇಂದ್ರ ಮೋದಿ : ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ
ಬೆಂಗಳೂರು , ಮಂಗಳವಾರ, 31 ಜನವರಿ 2023 (13:48 IST)
ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತು ಬಿಬಿಸಿ ಸಿದ್ಧಪಡಿಸಿದ್ದ ಸಾಕ್ಷ್ಯಚಿತ್ರ ಬೆಂಗಳೂರಿನಲ್ಲಿ ಪ್ರಸಾರವಾಗಿದೆ.

ಶನಿವಾರ ರಾತ್ರಿ ಇನ್ಫ್ಯಾಂಟ್ರಿ ರಸ್ತೆಯಲ್ಲಿರುವ ಆಲ್ ಇಂಡಿಯಾ ಸ್ಟುಡೆಂಟ್ಸ್ ಅಸೋಸಿಯೇಷನ್ ಕಚೇರಿಯಲ್ಲಿ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ ಮಾಡಲಾಗಿದೆ. 

ಈ ಸಂಬಂಧ ಎಐಎಸ್ಎ ಸದಸ್ಯೆ ಅರತ್ರಿಕಾ ಡೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಸುಮಾರು 40 ವಿದ್ಯಾರ್ಥಿಗಳು ಸಾಕ್ಷ್ಯಚಿತ್ರ ವೀಕ್ಷಿಸಲು ಎಐಎಸ್ಎ ಕಚೇರಿಗೆ ಬಂದಿದ್ದರು.

ಕ್ರೈಸ್ಟ್ ಕಾಲೇಜು, ಐಐಎಸ್ಸಿ, ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ, ಸೇಂಟ್ ಜೋಸೆಫ್ ಮತ್ತು ಇತರ ಕೆಲವು ಕಾಲೇಜುಗಳ ವಿದ್ಯಾರ್ಥಿಗಳು, ಆಲ್-ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ನ ಸದಸ್ಯರು ಸಾಕ್ಷ್ಯಚಿತ್ರ ವೀಕ್ಷಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಪಾಕಿಸ್ತಾನದಲ್ಲಿ ಇಂಧನ ಬೆಲೆ ಏರಿಕೆ !