Publish Date: Sun, 30 Apr 2023 (13:57 IST)
Updated Date: Sun, 30 Apr 2023 (14:58 IST)
ಬೆಂಗಳೂರು : ಕರ್ನಾಟಕ ಕುರುಕ್ಷೇತ್ರ ಪ್ರಚಾರ ಅಖಾಡಕ್ಕೆ ಪ್ರಧಾನಿ ನರೇಂದ್ರ ಮೋದಿ ಧುಮುಕಿದ್ದಾರೆ. ಬೆಂಗಳೂರಿನ ನೈಸ್ ರೋಡ್ ಜಂಕ್ಷನ್ನಿಂದ ಸುಮನಹಳ್ಳಿಯವರೆಗೆ ಅದ್ಧೂರಿಯಾಗಿ ರೋಡ್ ಶೋ ನಡೆಯಿತು.
ಪ್ರಧಾನಿ ಮೋದಿ ಅವರು ತೆರೆದ ವಾಹನದಲ್ಲಿ ಬರೋಬ್ಬರಿ 5 ಕಿ.ಮೀನಲ್ಲಿ ರೋಡ್ ಶೋ ನಡೆಸಿದರು. ಮಹಾಲಕ್ಷ್ಮೀ ಲೇಔಟ್, ಮಲ್ಲೇಶ್ವರಂ, ಯಲಹಂಕ, ದಾಸರಹಳ್ಳಿ, ಆರ್.ಆರ್ ನಗರ, ಯಶವಂತಪುರ, ಬ್ಯಾಟರಾಯನಪುರ, ಪುಲಿಕೇಶಿನಗರ, ಹೆಬ್ಬಾಳ ವಿಧಾನಸಭಾ ಕ್ಷೇತ್ರವನ್ನು ಗುರಿಯಾಗಿಸಿಕೊಂಡು ಬಿಜೆಪಿ ಚಿಹ್ನೆ ಇರುವ ಪೇಟ ಧರಿಸಿ ಮೋದಿ ರೋಡ್ ಶೋ ನಡೆಸಿದರು.
ಮೋದಿ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿ ಸದಾನಂದ ಗೌಡ ಮತ್ತು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಸಾಥ್ ನೀಡಿದರು. ಸುಮಾರು ಒಂದೂವರೆ ಗಂಟೆಗಳ ಕಾಲ ರೋಡ್ ಶೋ ನಡೆಯಿತು.