Publish Date: Fri, 21 Dec 2018 (11:37 IST)
Updated Date: Fri, 21 Dec 2018 (11:38 IST)
ಚಿಕ್ಕಮಗಳೂರು : ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕೆಂದು ಚಿಕ್ಕಮಗಳೂರು ನಗರದಲ್ಲಿ ಶಾಸಕರು ಪಡಿ ಸಂಗ್ರಹ ಮಾಡಿದ್ದಾರೆ.
ದತ್ತಜಯಂತಿಯ ಹಿನ್ನೆಲೆಯಲ್ಲಿ ಶಾಸಕ ಸಿ.ಟಿ.ರವಿ ಹಾಗೂ ದತ್ತ ಮಾಲಾಧಾರಿಗಳು ದತ್ತಾತ್ರೇಯ ಸ್ವಾಮಿ ಭಜನೆ ಮೂಲಕ ನಗರದ ನಾರಾಯಣಪುರದ ರಸ್ತೆಯಲ್ಲಿ ಮನೆ ಮನೆಗೆ ತೆರಳಿ ಪಡಿ ಸಂಗ್ರಹ ಮಾಡಿದ್ದಾರೆ. ಪಡಿ ಸಂಗ್ರಹಕ್ಕೆ ಆಗಮಿಸಿದ ದತ್ತಭಕ್ತರಿಗೆ ಅಕ್ಕಿ, ಬೆಲ್ಲ, ವೀಳ್ಯದೆಲೆಯನ್ನು ಜನರು ನೀಡಿದ್ದಾರೆ.
ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸಿಟಿ ರವಿ, ಪ್ರಧಾನಿ ಮೋದಿ ಅವರ ನೇತೃತ್ವ ಭಾರತಕ್ಕೆ ಅವಶ್ಯಕತೆ ಇದೆ. ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಭಾರತದ ಭವಿಷ್ಯ ಇನ್ನಷ್ಟು ಗಟ್ಟಿಯಾಗುತ್ತದೆ. ಹೀಗಾಗಿ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು. ಆದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 350ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು ಎಂದು ನಾನು ಹರಕೆ ಕಟ್ಟಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.